ನೂತನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಇಂದು ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಸಂಸತ್ತು ಭವನದಲ್ಲಿ ಏಳನೇ ಬಾರಿ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಬಜೆಟ್‌ ಮಂಡನೆ ಮಾಡುತ್ತಿರುವ ವೇಳೆಯಲ್ಲಿ ನಿರ್ಮಾಲ ಸೀತರಾಮನ್‌ ಅವರು ತಮ್ಮ ಬಜೆಟ್‌ ಆರಂಭಕ್ಕೂ ಮುನ್ನ ಪ್ರಧಾನಿ ನರೇಂಧ್ರ ಮೋದಿಯವರನ್ನು ಗುಣಗಾನ ಮಾಡಿದರು. ಇದೇ ವೇಳೆ ಅವರು ತಮ್ಮ ಬಜೆಟ್‌ ಮಂಡನೆ ವೇಳೇಯಲ್ಲಿ ಈ ವರ್ಷ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ 1.52 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಮೇಲ್ಛಾವಣಿ ಸೌರ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಅದನ್ನು ಮತ್ತಷ್ಟು ಉತ್ತೇಜಿಸುತ್ತದೆ ಅಂತ ಅವರು ಇದೇ ವೇಳೆ ತಿಳಿಸಿದರು.

Leave a Reply

Your email address will not be published. Required fields are marked *