ಉತ್ತರ ಕನ್ನಡ: ಶಿರೂರಿನಲ್ಲಿ ಭೂಕುಸಿತದಿಂದ ನಾಪತ್ತೆಯಾಗಿರುವ ಕೋಝಿಕ್ಕೋಡ್ ಮೂಲದ ಅರ್ಜುನ್ಗಾಗಿ ಶೋಧ ನಡೆಸುತ್ತಿರುವ ಮಧ್ಯೆ ಗಂಗಾವತಿ ನದಿಯಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ಸಚಿವ ಕೃಷ್ಣ ಬೈರೆ ಗೌಡ ಎಕ್ಸ್ ಖಾತೆ ಮೂಲಕ ತಿಳಿಸಿದ್ದಾರೆ.
“ಒಂದು ಟ್ರಕ್ ನದಿ ನೀರಿನಲ್ಲಿ ಇರುವುದು ಖಚಿತವಾಗಿದೆ. ನೌಕಾಪಡೆಯ ಶೀಘ್ರದಲ್ಲೇ ಹೊರ ತೆಗೆಯಲಿದ್ದಾರೆ, ಅದಕ್ಕಾಗಿ ಹರಸಾಹಸ ಪಡುತ್ತಿದ್ದಾರೆ. ಹಾಗೇ ನದಿಯಿಂದ ಹೂಳೆತ್ತಲು ಲಾಂಗ್ ಆರ್ಮ್ ಬೂಮರ್ ಅಗೆಯುವ ಯಂತ್ರವನ್ನು ಬಳಸಲಾಗುತ್ತಿದ್ದು. ಸುಧಾರಿತ ಡ್ರೋನ್ ಆಧಾರಿತ ಇಂಟೆಲಿಜೆಂಟ್ ಅಂಡರ್ಗ್ರೌಂಡ್ ಬರಿಡ್ ಆಬ್ಜೆಕ್ಟ್ ಡಿಟೆಕ್ಷನ್ ಸಿಸ್ಟಮ್ ಅನ್ನು ಸಹ ಶೋಧಕ್ಕಾಗಿ ನಿಯೋಜಿಸಲಾಗಿದೆ. ಕೋಸ್ಟ್ ಗಾರ್ಡ್ ನೀರಿನಲ್ಲಿ ನಾಪತ್ತೆಯಾದ ಶವಗಳಿಗಾಗಿ ಹೆಲಿಕಾಪ್ಟರ್ ಹುಡುಕಾಟ ನಡೆಸಲಿದೆ ಎಂದು ಕರ್ನಾಟಕ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.
ಕೃಪೆ: ಒನ್ ಮನೋರಮ