ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮ್ಯಾಕನಿಕ್ ಸಿ.ಎಚ್. ಹನೀಫ್ ಅವರ ಪುತ್ರ
ಬಾತಿಷಾ( 22) ಮೃತಪಟ್ಟ ಯುವಕ .
ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ಕಳೆದ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.