Advertisement

ಸುಳ್ಯ: 75 ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ, ಸರಕಾರಿ  ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರದ ಆವರಣದಲ್ಲಿ  ಶ್ರಮದಾನ ಹಾಗೂ 75 ಗಿಡ ನೆಡುವ  ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಜ್ರಮಹೋತ್ಸವದ ಪ್ರಯುಕ್ತ ಒಟ್ಟು 75 ಉತ್ಕೃಷ್ಟ ಮಟ್ಟದ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಶ್ರಮದಾನ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕ’ ಸುಳ್ಯ ವಲಯ ನೆರವೇರಿಸಿದರು. ಸಸಿ ನೆಡುವ ಕಾರ್ಯಕ್ರಮನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಝೀರ್ ಶಾಂತಿನಗರ ನೆರವೇರಿಸಿದರು. ಈ ಸಂಧರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ತುಳಸಿ, ‘ವಿಪತ್ತು ನಿರ್ವಹಣಾ ಘಟಕ’ ಸುಳ್ಯ ವಲಯ ಇದರ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಊರಿನ ಹಿರಿಯರು, ಶಾಲಾ ಶಿಕ್ಷಕಿ, ವಿದ್ಯಾರ್ಥಿಗಳು, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ