ಬೆಳ್ಳಾರೆ: ಕೆಲ ದಿನಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಇವರ ಮನೆಗೆ ಕಡೂರು ಶಾಸಕ ಬೆಳ್ಳಿಪ್ರಕಾಶ್ ಭೇಟಿ ನೀಡಿ ಸಾಂತ್ವಾನ ಹೇಳಿದರು. ₹5 ಲಕ್ಷ ಧನಸಹಾಯ ನೀಡಿದರು . ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕಿಲ್ಮಡುರಪ್ಪ ಜಿಲ್ಲಾ ಕಾರ್ಯದರ್ಶಿ ದೇವರಾಜ ಶೆಟ್ಟಿ, ಬೀರೂರು ಪುರಸಭಾ ಅಧ್ಯಕ್ಷ ಎಂ.ಪಿ.ಸುದರ್ಶನ್ ಮತ್ತು ತಾಲೂಕು ಮುಖಂಡರು ಹಾಗೂ ಸುಳ್ಯ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಶ್ಯಾಮಸುಂದರ ರೈ, ಶೈಲೇಶ್ ನೆಟ್ಟಾರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಹಾಗೂ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಕೂಡಾ ಭೇಟಿ ನೀಡಿ ₹50 ಧನಸಹಾಯ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಾಗರ ತಾಲೂಕು ಪಂಚಾಯತ್ ಮಾಜಿ ಸದಸ್ಯ ಸುಬ್ಬಣ್ಣ, ಪಿ.ಎಲ್.ಡಿ. ನಿರ್ದೇಶಕ ಸತೀಶ, ಹೊಸನಗರ ನಗರ ಪಂಚಾಯತ್ ಉಪಾಧ್ಯಕ್ಷೆ ಕೃಷ್ಣವೇಣಿ, ಸುಮಾ, ಹೊಸನಗರ ಒ.ಬಿ.ಸಿ ಮೋರ್ಚಾ ಉಪಾಧ್ಯಕ್ಷ ಹೂವಪ್ಪ, ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯ ಪಿ.ರಮೇಶ ಹಾಗೂ ಬಿಲ್ಲವ ಸಮಾಜದ ಮುಖಂಡರು ಉಪಸ್ಥಿತರಿದ್ದರು.
