Advertisement
ಸುಳ್ಯ: ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸುಳ್ಯದ ಜಟ್ಟಿಪಳ್ಳದ ಅಬ್ದುಲ್ ಕಬೀರ್ (33) ಎಂದು ತಿಳಿದು ಬಂದಿದೆ. ಈ ಹತ್ಯೆ ಪ್ರಕರಣದಲ್ಲಿ ಇಲ್ಲಿ ತನಕ ಒಟ್ಟು ಏಳು ಆರೋಪಗಳನ್ನು ಬಂಧಿಸಲಾಗಿದೆ. ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ, ಕಬೀರ್ ಹತ್ಯೆ ಪ್ರಕರಣದ ಯೋಜನೆಯಲ್ಲಿ ಭಾಗಿಯಾಗಿದ್ದ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.
Advertisement