ಬಿಜೆಪಿ ಯುವಮೋರ್ಚಾ ಮುಖಂಡ , ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇಡೀ ಪ್ರಕರಣದ ಮಾಸ್ಟರ್‌ ಮೈಂಡ್‌ ಶಿಹಾಬ್ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಬೇಧಿಸಿದ ಜಿಲ್ಲಾ ಪೊಲೀಸರು ಇಡೀ ಪ್ರಕರಣದ ಪ್ರಮುಖ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿಗಳು ಶಿಹಾಬುದ್ದೀನ್ ಸುಳ್ಯ(33), ಬಶೀರ್ ಎಲಿಮಲೆ (29) ರಿಯಾಸ್ ಅಂಕತ್ತಡ್ಕ (27). ಆರೋಪಿಗಳ ಬಗ್ಗೆ ಮಾಹಿತಿ ಇದ್ದರೂ ಪದೇ ಪದೇ ಸ್ಥಳ ಬದಲಾವಣೆ ಮಾಡುತ್ತಿದ್ದ ಕಾರಣ ಪ್ರಮುಖ ಆರೋಪಿಗಳ ಬಂಧನಕ್ಕೆ ತಡವಾಗಿದೆ. ಹತ್ಯೆ ಮಾಡಿದ ಬಳಿಕ ಆರೋಪಿಗಳು ಕಾಸರಗೋಡಿನ ಮಸೀದಿಯೊಂದರಲ್ಲಿ ಆಶ್ರಯ ಪಡೆದಿದ್ದಾರೆ ಎನ್ನುವುದು ಮಾಹಿತಿ ಲಭ್ಯವಾಗಿದೆ. ಅದಾದ ನಂತರ ಸ್ಥಳ ಬದಲಾವಣೆಗಾಗಿ ಎಲ್ಲೆಲ್ಲಾ ಹೋಗಿದ್ದಾರೆ ಎಂಬ ಮಾಹಿತಿ ಪಡೆಯಲಾಗುತ್ತಿದ್ದು ತನಿಖೆಯ ಬಳಿಕ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು. ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎನ್ನುವುದು ತನಿಖೆ ನಡೆಸಲಾಗುತ್ತಿದೆ. ಇದುವರೆಗೆ ಈ ಆರೋಪಿಗಳ ಮೇಲೆ ಬೇರೆ ಯಾವುದೇ ಕೇಸುಗಳು ಇಲ್ಲ. ಆರೋಪಿಗಳಿಗೆ ಯಾವೆಲ್ಲಾ ಸಂಘಟನೆಗಳ ಜೊತೆ ಲಿಂಕ್‌ ಇದೆ ಎನ್ನುವುದನ್ನು ಪತ್ತೆ ಮಾಡಲಾಗುತ್ತಿದೆ, ತನಿಖೆಯ ಸಂಪೂರ್ಣ ವರದಿಯನ್ನು ಎನ್ಐಎ ಗೆ ನೀಡಲಿದ್ದೇವೆ ಮುಂದಕ್ಕೆ ಅವರು ತನಿಖೆ ಮುಂದುವರಿಸಲಿದ್ದಾರೆ ಎಂದು ಅಲೋಕ್‌ ಕುಮಾರ್‌ ಮಾಹಿತಿ ನೀಡಿದರು.


ಆರೋಪಿಗಳೆಲ್ಲರನ್ನು ಬಂಧಿಸಲು ಎಡಿಜಿಪಿ ಅಲೋಕ್ ಕುಮಾರ್ ಪ್ಲ್ಯಾನ್‌ ಮಾಡಿದ್ದರು. ಮೊದಲು ಹಂತಕರ ಕುಟುಂಬ ಬಳಿಕ ಹಂತಕರ ಆತ್ಮೀಯರ ತೀವ್ರ ವಿಚಾರಣೆ ನಡೆಸಿದ್ದರು. ಈ ವೇಳೆ ಕೃತ್ಯಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗವಹಿಸಿದವರ ಎಲ್ಲರ ಆಸ್ತಿ ಮುಟ್ಟುಗೋಲು ಹಾಕುವುದಾಗಿ ಎಚ್ಚರಿಕೆ ಕೂಡ ನೀಡಿದ್ದರು.

ಹದಿನೈದು ದಿನದಲ್ಲಿ ಐದು ಬಾರಿ ಬೆಳ್ಳಾರೆಗೆ ಭೇಟಿ ನೀಡಿದ್ದ ಎಡಿಜಿಪಿ ಅಲೋಕ್ ಕುಮಾರ್ ಬುಧವಾರವೂ ಆರು ಜಿಲ್ಲೆಯ ಎಸ್ಪಿಗಳ ಜೊತೆ ಸಭೆ ನಡೆಸಿದ್ದರು.

ಅಷ್ಟೇ ಅಲ್ಲದೇ ಹಂತಕರಿಗೆ ಆಶ್ರಯ ನೀಡಿದವರಿಗೂ ಖಡಕ್ ಎಚ್ಚರಿಕೆ ನೀಡಿದ್ದರು.

ಎಚ್ಚರಿಕೆ ನೀಡಿದ ಬೆನ್ನಲ್ಲೇ ಹಂತಕರು ಸೆರೆಯಾಗಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ