ವಯನಾಡು ∙ ಮೆಪ್ಪಾಡಿ ಮುಂಡಕೈ ಪಟ್ಟಣ ಮತ್ತು ಚೂರಲ್ ಮಲ ಎಂಬ ಮೂರು ಪ್ರದೇಶದಲ್ಲಿ ಇಂದು ಬೆಳಗ್ಗಿನಜಾವ ಭಾರಿ ಭೂಕುಸಿತ ಸಂಭವಿಸಿದೆ. ಮುಂಡಕೈ ಪೇಟೆಯಲ್ಲಿ ಬೆಳಗಿನ ಜಾವ ಸರಿಸುಮಾರು 4 ಗಂಟೆ ಸುಮಾರಿಗೆ ಸುರಿದ ಭಾರಿ ಮಳೆಗೆ ಮೊದಲ ಭೂಕುಸಿತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಚೂರಲ್ ಮಲ ಶಾಲೆಯ ಬಳಿ ಎರಡನೇಯ ಭೂಕುಸಿತ ಸಂಭವಿಸಿದೆ. ಸ್ಥಳೀಯ ಮಾದ್ಯಮ ನೀಡಿದ ವರದಿಯ ಪ್ರಕಾರ ಶಾಲೆ ಕೂಡ ಬಾಗಶ: ಕೊಚ್ಚಿ ಹೋಗಿವೆ. ಜಲಸ್ಪೋಟದಲ್ಲಿ ಬಂಡೆ ಕಲ್ಲುಗಳು ಕೊಚ್ಚಿಕೊಂಡು ಅತೀ ವೇಗದಲ್ಲಿ ಬಂದಿದ್ದರಿಂದ ಹೆಚ್ಚಿನ ಪ್ರಮಾಣದ ನಾಶ ಸಂಭವಿಸಿದೆ.
ಒಟ್ಟು ಮೂರು ಕಡೆಗಳಲ್ಲಿ ಬಾರಿ ಭೂಕುಸಿತ ಸಂಭವಿಸಿದೆ ಎನ್ನುತ್ತಾರೆ ಸ್ಥಳೀಯರು. ಒಂದು ಸಾವು ವರದಿಯಾಗಿದೆ.
ಈ ಪ್ರದೇಶದಲ್ಲಿ ಸುಮಾರು 400 ಕುಟುಂಬಗಳು ಅಸಹಾಯಕ ಸ್ಥಿಯಲಿದೆ ಎಂದು ವರದಿಯಾಗಿದೆ. ಅನೇಕ ಜನರು ಗಾಯಗೊಂಡಿದ್ದಾರೆ. ಹಲವು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಪ್ರದೇಶದ ಮುಖ್ಯ ರಸ್ತೆ ಮತ್ತು ಚೂರಲ್ ಮಲ ಪಟ್ಟಣದ ಸೇತುವೆ ಹಾನಿಗೊಳಗಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯಾಗಿದೆ. ಮುಂಡಕೈ ಅಟ್ಟಮಲ ಪ್ರದೇಶಕ್ಕೆ ಇದು ಏಕೈಕ ಸೇತುವೆಯಾಗಿದೆ. ರಾತ್ರಿಯಾಗಿರುವುದರಿಂದ ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಅತ್ಯಂತ ಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರಡ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಟಿ.ಸಿದ್ದೀಕ್ ಶಾಸಕರು ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಈ ಪ್ರದೇಶದಲ್ಲಿ ಸಿಲುಕಿರುವ ಜನರನ್ನು ಸ್ಥಳಾಂತರಿಸುವ ಪ್ರಯತ್ನ ನಡೆಯುತ್ತಿದೆ. ಭಾರೀ ಶಬ್ದದೊಂದಿಗೆ ಭೂಕುಸಿತ ಸಂಭವಿಸಿದೆ ಎಂದು ಸ್ಥಳೀಯರು ಹೇಳುತ್ತಾರೆ. 2019 ರಲ್ಲಿ ಭೂಕುಸಿತಕ್ಕೆ ಒಳಗಾದ ಪುತ್ತುಮಲ ಬಳಿ ಮುಂಡಕೈ ಇದೆ.