ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ಬೆಳಗ್ಗೆ ಗುಡ್ಡ ಕುಸಿದಿದ್ದು ಮೃತರ ಸಂಖ್ಯೆ 45 ಕ್ಕೆ ಏರಿಕೆಯಾಗಿದೆ. 100ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರುದಾಡುತ್ತಿದ್ದು ಮೈ ಜುಮ್ ಎನಿಸುತ್ತಿದೆ. ಸರಕಾರಿ ಶಾಲೆ ವಲ್ಲರ್ ಮಲ ನಿನ್ನೆ ಹೇಗಿತ್ತು ಇವತ್ತು ಹೇಗಿದೆ
ಮೊದಲ ಭೂಕುಸಿತವು ಸುಮಾರು 2 ಗಂಟೆಗೆ ಪ್ರದೇಶಕ್ಕೆ ಅಪ್ಪಳಿಸಿತು. ನಂತರ, ವಿವರಗಳ ಪ್ರಕಾರ, ಜಿಲ್ಲೆಯು ಮುಂಜಾನೆ 4.10 ರ ಸುಮಾರಿಗೆ ಮತ್ತೊಂದು ಭೂಕುಸಿತ ಸಂಭವಿಸಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿರುವ ವಯನಾಡ್ ಮಾಜಿ ಸಂಸದ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ, ಅವರಿಗೆ ನೆರವಿನ ಭರವಸೆ ನೀಡಿದ್ದಾರೆ. ವಯನಾಡಿನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ, ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ, ಗಾಯಗೊಂಡವರು ಬೇಗ ಗುಣಮುಖರಾಗಲಿ. ಭೂಕುಸಿತದ ಕುರಿತು ಪಿಣರಾಯಿ ವಿಜಯ್ ಅವರೊಂದಿಗೆ ಮಾತನಾಡಿದ್ದೇನೆ ಎಲ್ಲಾ ನೆರವನ್ನು ನೀಡಲು ಕೇಂದ್ರ ಸಿದ್ಧವಿದೆ ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.