ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ, ಕುಂಬ್ರ – ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ.
ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು, 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಈ ಪುತ್ತೂರು-ಸುಳ್ಯ ರಸ್ತೆ ಸಂಚಾರ ಬಂದ್ ಆಗಿರುವ ಕಾರಣ, ಕೆಎಸ್ಆರ್ಟಿಸಿ ಬಸ್ ಗಳು ಬದಲಿ ಮಾರ್ಗ ಬೆಳ್ಳಾರೆ ಮೂಲಕ ಸುಳ್ಯ,- ಪುತ್ತೂರು ಸಂಚಾರ ಆರಂಭಿಸಿವೆ ಎಂದು ಸುಳ್ಯ ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.