ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ.ಗುಡ್ಡ ಕುಸಿತ ಸಂಭವಿಸುವ ಸಮಯ ಯಾವುದೇ ವಾಹನ ಸಂಚಾರ ಇಲ್ಲದಿರುವುದರಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದಂತಾಗಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.