ಢಾಕಾ: ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ, ಗ್ರಾಮೀಣ ಬ್ಯಾಂಕ್‌ ಸ್ಥಾಪಿಸಿದ್ದ ಮೊಹಮ್ಮದ್‌ ಯೂನುಸ್‌ (Muhammad Yunus) ಬಾಂಗ್ಲಾದೇಶ (Bangladesh) ಸರ್ಕಾರದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ. ಸಂಸತ್ತನ್ನು ವಿಸರ್ಜಿಸಿದ ಬೆನ್ನಲ್ಲೇ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಬುಧವಾರ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸಿದ್ದಾರೆ. ಸಂಸತ್ತನ್ನು ವಿಸರ್ಜಿಸಿದ ಬಳಿಕ ಶಹಾಬುದ್ದೀನ್ ಅವರು ರಕ್ಷಣಾ ಪಡೆಯ ಮೂರೂ ವಿಭಾಗಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಚಳವಳಿಯ (Student Protest) 13 ಸದಸ್ಯರೊಂದಿಗೆ ಮಧ್ಯಂತರ ಸರ್ಕಾರದ ರಚನೆ ಬಗ್ಗೆ ಚರ್ಚೆ ನಡೆಸಿದ್ದರು. ಈ ವೇಳೆ ಯೂನುಸ್‌ ಅವರಿಗೆ ಅಧಿಕಾರ ನೀಡಬೇಕೆಂದು ವಿದ್ಯಾರ್ಥಿಗಳ ಆಗ್ರಹಿಸಿದ್ದಾರೆ ಎಂಬುದಾಗಿ ವಿದ್ಯಾರ್ಥಿ ನಾಯಕ ನಹೀದ್‌ ಇಸ್ಲಾಂ ಹೇಳಿದ್ದರು

Leave a Reply

Your email address will not be published. Required fields are marked *