ಶಿಕ್ಷಣಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 7 ಬುದವಾರದಂದು ನೆರವೇರಿತು.
ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ ಮತ್ತು ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *