Advertisement
ನವದೆಹಲಿ: ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಕಾಸರಗೋಡಿನ ವೀರ ಯೋಧ ಕೂಡ ಅಸುನೀಗಿದ್ದಾರೆ.

ಕಾಸರಗೋಡು ಜಿಲ್ಲೆಯ ಚೆರ್ವತ್ತೂರು ನಿವಾಸಿಯಾದ ಅಶ್ವಿನ್ ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಭಾರತಾಂಬೆಯ ಪುತ್ರ .

ಓಣಂ ಹಬ್ಬದ ವೇಳೆ ಊರಿಗೆ ಬಂದಿದ್ದ ಅಶ್ವಿನ್ ಕಳೆದ ನಾಲ್ಕು ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಪಾರ್ಥಿವ ಶರೀರವನ್ನು ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ, ಅಲ್ಲಿಂದ ಸ್ವಗೃಹಕ್ಕೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
Advertisement