ಸುಳ್ಳದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ 2024 25 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ ಉಪಸ್ಥಿತರಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಪ್ರಾಸ್ತಾವಿಕವಾಗಿ ಮಾತನಾಡಿ ಎರಡು ಸಂಸ್ಥೆಗಳ ಧ್ಯೇಯ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ಎನ್ನೆಸ್ಸೆಸ್ ಘಟಕ 2 ರ ಕಾರ್ಯಕ್ರಮಾಧಿಕಾರಿ ಸುನಿಲ್ ಕುಮಾರ್ ಎನ್.ಪಿ ಎನ್ಎಸ್ಎಸ್ ಸ್ವಯಂ ಸೇವಕರಿಗೆ ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿ, ಪ್ರಮಾಣ ವಚನ ಬೋಧಿಸಿದರು.
2024 – 25 ನೇ ಸಾಲಿನ ಎನ್ಎಸ್ಎಸ್ ಘಟಕದ ನಾಯಕರಾಗಿ ಗೌತಮ್, ಪ್ರಣಮ್, ಅಪೂರ್ವ ಮತ್ತು ದೀಕ್ಷಿತಾ ಇವರಿಗೆ ಅಧಿಕಾರ ನೀಡಲಾಯಿತು. 2023-24 ನೇ ಸಾಲಿನ ನಾಯಕರಾದ ದರ್ಶನ್ ಎಂ.ಪಿ, ರಾಜೇಶ್ ಬಿ, ರಕ್ಷಿತಾ ಡಿ.ಎ ಹಾಗೂ ಜೇಷ್ಮಾ ಎಸ್.ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತೇಜಸ್ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ರಕ್ಷಿತಾ ಸ್ವಾಗತಿಸಿ, ಅಪೂರ್ವ ವಂದಿಸಿದರು. ಜೇಷ್ಮಾ ಎಸ್.ಬಿ ಕಾರ್ಯಕ್ರಮ ನಿರೂಪಿಸಿದರು ಕಾರ್ಯಕ್ರಮದ ನಂತರ 24- 25 ನೇ ಸಾಲಿನ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.