
ಐವರ್ನಾಡು ಗ್ರಾಮದ ಪ್ರಗತಿಪರ ಕೃಷಿಕರಾದ ಸಿ.ಕೆ.ನವೀನ್ ಚಾತುಬಾಯಿಯವರಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಥಮ ರೇಷ್ಮೆ ಕೃಷಿ ಮೇಳದಲ್ಲಿ ಉತ್ತಮ ಮಿಶ್ರ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ರೇಷ್ಮೆ ಇಲಾಖೆ ಮತ್ತು ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ಮೇ 20ನೇ ತಾರೀಕು ಬುಧವಾರದಂದು ವಿಟ್ಲದ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ಆಯೋಜಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಥಮ ರೇಷ್ಮೆ ಕೃಷಿ ಮೇಳದಲ್ಲಿ ಕರ್ನಾಟಕ ಸರ್ಕಾರದ ರೇಷ್ಮೆ ಇಲಾಖೆ ಮತ್ತು ಪಶುಸಂಗೋಪನಾ ಸಚಿವರಾದ ಶ್ರೀ ಕೆ. ವೆಂಕಟೇಶ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
ಕಾರ್ಯಕ್ರಮವನ್ನು ರೇಷ್ಮೆ ಇಲಾಖೆ ಸಚಿವರು ಉದ್ಘಾಟಿಸಿ ಮಾತನಾಡಿದರು. ರೇಷ್ಮೆ ಇಲಾಖೆ ಜಂಟಿ ನಿರ್ದೇಶಕಿ ಪ್ರತಿಭಾ ಬಿ.ಆರ್. ಹಿರಿಯ ಪತ್ರಕರ್ತ ಡಾ. ಯು.ಪಿ.ಶಿವಾನಂದ,ಜಿಲ್ಲಾ ರೈತ ಸಂಘದ ಅಧ್ಯಕ್ಷ ಶ್ರೀಧರ ಶೆಟ್ಟಿ,ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.







