ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ್ ಭಂಡಾರಿಯವರ ಶಾಸಕರ ನಿಧಿಯ ಅನುದಾನದಿಂದ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ್ಡಡ್ಕ – ರಂಗತ್ತಮಲೆ ರಸ್ತೆ ಕಾಂಕ್ರಿಟೀಕರಣಕ್ಕೆ ಇಂದು ಗುದ್ದಲಿಪೂಜೆ ನಡೆಯಿತು. ಮಾಜಿ ಜಿಲ್ಲಾ ಪರಿಷತ್ ಸದಸ್ಯ ದೇವಪ್ಪ ನಾಯ್ಕ ಹೊನ್ನೆಡಿ ಹಾಗೂ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಸದಸ್ಯ ತೇಜಕುಮಾರ್ ಬಡ್ಡಡ್ಕ ಗುದ್ದಲಿ ಪೂಜೆ ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಕೆಡಿಪಿ ಸದಸ್ಯ ಧರ್ಮಪಾಲ ಕೊಯಿಂಗಾಜೆ, ಪುರುಷೋತ್ತಮ ದೋಣಿಮೂಲೆ, ತೀರ್ಥರಾಮ ಬಡ್ಡಡ್ಕ, ಹೇಮಾನಾಥ್ ಬಡ್ಡಡ್ಕ, ಗುತ್ತಿಗೆದಾರ ಗಿರೀಶ್ ನಾರ್ಕೋಡು ಮೊದಲಾದವರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸದಸ್ಯ ಸತ್ಯಕುಮಾರ್ ಆಡಿಂಜಾ ಸ್ವಾಗತಿಸಿ ಪ್ರಸನ್ನ ಬಡ್ಡಡ್ಕ ವಂದಿಸಿದರು.

Leave a Reply

Your email address will not be published. Required fields are marked *