
ಪೈಚಾರ್: ಕಾಯಿಂಚ್ಚ ಮೂಲಕ ಚಿರಪರಿಚಿತರಾಗಿದ್ದ ಅಬ್ದುಲ್ ಕಾದರ್ (64ವ) ಅವರು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಓರ್ವ ಪುತ್ರ, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ನಾಳೆ ದಫನ ಕಾರ್ಯ:
ಮೃತರ ಜನಾಝಾ ನಮಾಝ್ ಹಾಗೂ ದಫನ ಕಾರ್ಯವು ನಾಳೆ (ಮೇ 30 ರಂದು) ಪೈಚಾರ್‌ನ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.







