ಪೆರಡ್ಕ-ಗೂನಡ್ಕದ ಎಂ.ಜೆ.ಎಂ ಅಲ್ ಬಿರ್ರ್ ಪ್ರೀ ಸ್ಕೂಲ್‌ನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜೂ.09 ರಂದು ಅದ್ದೂರಿಯಾಗಿ ನೆರವೇರಿತು.

ಸಯ್ಯಿದ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಅವರು ನೂತನ ಕಟ್ಟಡವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ವಹಿಸಿದ್ದರು.

ಅಲ್ ಬಿರ್ರ್ ಶಿಕ್ಷಣ ಸಂಸ್ಥೆಯು ಗುಣಮಟ್ಟದ ಶಿಕ್ಷಣದೊಂದಿಗೆ ನೈತಿಕ ಮೌಲ್ಯಗಳು, ಶಿಸ್ತು, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಮಕ್ಕಳಲ್ಲಿ ಬೆಳೆಸುವ ಉದ್ದೇಶದಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಮಕ್ಕಳ ಕಲಿಕಾ ಸಾಮರ್ಥ್ಯವನ್ನು ವೃದ್ಧಿಸುವ ಆಧುನಿಕ ಶಿಕ್ಷಣ ವಿಧಾನಗಳು, ಆಟದ ಮೂಲಕ ಕಲಿಕೆ ಹಾಗೂ ಮಕ್ಕಳ ಸ್ನೇಹಿ ವಾತಾವರಣಕ್ಕೆ ಸಂಸ್ಥೆ ವಿಶೇಷ ಆದ್ಯತೆ ನೀಡುತ್ತಿದೆ.

ನೂತನ ಕಟ್ಟಡವು ವಿಶಾಲ ತರಗತಿ ಕೊಠಡಿಗಳು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಹೊಂದಿದ್ದು, ಈ ಭಾಗದ ಶಿಕ್ಷಣ ಕ್ಷೇತ್ರಕ್ಕೆ ಮತ್ತಷ್ಟು ಬಲ ತುಂಬಲಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ಖತೀಬರಾದ ಆಸಿಫ್ ಅಝ್ಹರಿ, ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ, ಅನ್ವಾರುಲ್ ಹುಧಾ ಅಸೋಸಿಯೇಶನ್ ಅಧ್ಯಕ್ಷ ಅಮೀರ್ ಕುಕ್ಕುಂಬಳ , ಜಮಾಅತ್ ಕಾರ್ಯದರ್ಶಿ ಕೆ.ಎಮ್ ಮೂಸಾನ್, ಕೋಶಾಧಿಕಾರಿ ಅಬೂಬಕ್ಕರ್ ಪಾರೆಕ್ಕಲ್, ಸುಳ್ಯ ನಗರ ಪ್ರಾಧಿಕಾರ ಅಧ್ಯಕ್ಷ ಕೆ.ಎಂ ಮುಸ್ತಫ, ಹಮೀದ್ ಹಾಜಿ ಸುಳ್ಯ, ನ್ಯಾಯವಾದಿ ಮೂಸ ಪೈಂಬಚ್ಚಾಲ್, ಇಬ್ರಾಹಿಂ ಹಾಜಿ ಕತ್ತರ್, ಡಿಗ್ನಿಟಿ ಗೋಲ್ಡ್ ಮಾಲಕ ಬಾತಿಶ ಕನಕಮಜಲು, ಬದುರುದ್ದೀನ್ ಪಠೇಲ್, ಸೈಫುದ್ಧೀನ್ ಪಠೇಲ್, ಹಾಜಿ ಕೆ.ಎಂ. ಮಹ್ಮದ್, ಹಾಜಿ ಅಬ್ದುಲ್ ಖಾದರ್ ಪಠೇಲ್, ಅಸೋಸಿಯೇಶನ್ ಉಪಾಧ್ಯಕ್ಷ ಹಾಜಿ ಅಝಾರುದ್ಧೀನ್, ಕೋಶಾಧಿಕಾರಿ ಸಂಶುದ್ಧೀನ್ ಪೆಲ್ತಡ್ಕ ಕಾರ್ಯದರ್ಶಿ ಪಸೀಲು ಸ್ವಲಾತ್ ಕಮಿಟಿ ಅಧ್ಯಕ್ಷ ಕೆ.ಎಸ್ ಇಬ್ರಾಹಿಂ ಕುಕ್ಕುಂಬಳ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಜುಬೈರ್, ಕಾರ್ಯದರ್ಶಿ ಸಂಶುದ್ಧೀನ್ ಕ್ಯೂರ್, ಮುಜೀಬ್, ಶಿಕ್ಷಣ ಪ್ರೇಮಿಗಳು, ಪೋಷಕರು, ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಸಂಸ್ಥೆಯ ಶೈಕ್ಷಣಿಕ ಸೇವೆಯನ್ನು ಶ್ಲಾಘಿಸಿದ ಗಣ್ಯರು, ಮುಂದಿನ ದಿನಗಳಲ್ಲಿ ಅಲ್ ಬಿರ್ರ್ ಶಿಕ್ಷಣ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲಿ ಎಂದು ಹಾರೈಸಿದರು.

Leave a Reply

Your email address will not be published. Required fields are marked *