ಸುಳ್ಯ: ಪೇರಡ್ಕ ಗೂನಡ್ಕದಲ್ಲಿ ನೂತನವಾಗಿ ನಿರ್ಮಿಸಲಾದ ಸುಸಜ್ಜಿತ ಅತಿಥಿ ಗೃಹದ ಉದ್ಘಾಟನಾ ಸಮಾರಂಭವು ಜೂನ್ 09ರಂದು ಮಂಗಳವಾರ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ರಾಜ್ಯ ಪ್ರವಾಸೋದ್ಯಮ ಇಲಾಖೆಯ ವಿಶೇಷ ಅನುದಾನದಡಿ ಸುಮಾರು ₹70 ಲಕ್ಷದ ವೆಚ್ಚದಲ್ಲಿ ಈ ಸುಸಜ್ಜಿತ ಅತಿಥಿ ಗೃಹವನ್ನು ಭವ್ಯವಾಗಿ ನಿರ್ಮಿಸಲಾಗಿದ್ದು, ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು.
ಸಯ್ಯದ್ ಉಲಮಾ ಅವರಿಂದ ಉದ್ಘಾಟನೆ:
ನೂತನ ಅತಿಥಿ ಗೃಹದ ಭವ್ಯ ಉದ್ಘಾಟನೆಯನ್ನು ಪ್ರಮುಖ ಆಧ್ಯಾತ್ಮಿಕ ನಾಯಕರಾದ ಸಯ್ಯದ್ ಉಲಮಾ ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ಅವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಶೈಕ್ಷಣಿಕ ಮತ್ತು ಧಾರ್ಮಿಕ ಸಂಸ್ಥೆಗಳ ಜೊತೆಗೆ ಇಂತಹ ಸಾರ್ವಜನಿಕ ಉಪಯುಕ್ತ ಮೂಲಸೌಕರ್ಯಗಳು ಅಭಿವೃದ್ಧಿಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಮುಹಿಯುದ್ದೀನ್ ಜುಮಾ ಮಸೀದಿ ಪೇರಡ್ಕ ಗೂನಡ್ಕ ಇದರ ಆಡಳಿತ ಸಮಿತಿ ಅಧ್ಯಕ್ಷ, ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ರಾದ ಟಿ.ಎಂ ಶಾಹೀದ್ ತೆಕ್ಕಿಲ್, ಸಯ್ಯದ್ ಜಲಾಲುದ್ದೀನ್ ತಂಙಳ್, ಖತೀಬರಾದ ಆಸಿಫ್ ಅಝ್ಹರಿ, ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ, ಅನ್ವಾರುಲ್ ಹುಧಾ ಅಸೋಸಿಯೇಶನ್ ಅಧ್ಯಕ್ಷ ಅಮೀರ್ ಕುಕ್ಕುಂಬಳ , ಜಮಾಅತ್ ಕಾರ್ಯದರ್ಶಿ ಕೆ.ಎಮ್ ಮೂಸಾನ್, ಕೋಶಾಧಿಕಾರಿ ಅಬೂಬಕ್ಕರ್ ಪಾರೆಕ್ಕಲ್, ಸುಳ್ಯ ನಗರ ಪ್ರಾಧಿಕಾರ ಅಧ್ಯಕ್ಷ ಕೆ.ಎಂ ಮುಸ್ತಫ, ಹಮೀದ್ ಹಾಜಿ ಸುಳ್ಯ, ನ್ಯಾಯವಾದಿ ಮೂಸ ಪೈಂಬಚ್ಚಾಲ್, ಇಬ್ರಾಹಿಂ ಹಾಜಿ ಕತ್ತರ್, ಡಿಗ್ನಿಟಿ ಗೋಲ್ಡ್ ಮಾಲಕ ಬಾತಿಶ ಕನಕಮಜಲು, ಬದುರುದ್ದೀನ್ ಪಠೇಲ್, ಸೈಫುದ್ಧೀನ್ ಪಠೇಲ್, ಹಾಜಿ ಕೆ.ಎಂ. ಮಹ್ಮದ್, ಹಾಜಿ ಅಬ್ದುಲ್ ಖಾದರ್ ಪಠೇಲ್, ಅಸೋಸಿಯೇಶನ್ ಉಪಾಧ್ಯಕ್ಷ ಹಾಜಿ ಅಝಾರುದ್ಧೀನ್, ಕೋಶಾಧಿಕಾರಿ ಸಂಶುದ್ಧೀನ್ ಪೆಲ್ತಡ್ಕ ಕಾರ್ಯದರ್ಶಿ ಪಸೀಲು ಸ್ವಲಾತ್ ಕಮಿಟಿ ಅಧ್ಯಕ್ಷ ಕೆ.ಎಸ್ ಇಬ್ರಾಹಿಂ ಕುಕ್ಕುಂಬಳ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಜುಬೈರ್, ಕಾರ್ಯದರ್ಶಿ ಸಂಶುದ್ಧೀನ್ ಕ್ಯೂರ್, ಮುಜೀಬ್ ಮೊದಲಾದವರು ಉಪಸ್ಥಿತರಿದ್ದರು. ಪ್ರವಾಸೋದ್ಯಮ ಇಲಾಖೆಯ ಅನುದಾನವನ್ನು ಸೂಕ್ತವಾಗಿ ಬಳಸಿ ಸುಂದರ ಕಟ್ಟಡ ನಿರ್ಮಿಸಿರುವುದಕ್ಕೆ ಸ್ಥಳೀಯ ಸಾರ್ವಜನಿಕರು ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.







