ಸುಳ್ಯ: ‘ರಕ್ತದಾನ ಮಾಡಿ ಜೀವ ಉಳಿಸಿ’ ಎಂಬ ಉದಾತ್ತ ಧ್ಯೇಯದೊಂದಿಗೆ ಸುಳ್ಯ ತಾಲೂಕಿನಲ್ಲಿ ಜೂನ್ 13 ರಂದು ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಆಂಬುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು, ಸರ್ಕಾರಿ ಆಸ್ಪತ್ರೆ ಸುಳ್ಯ ಹಾಗೂ ಜೆಸಿಐ ಸುಳ್ಯ ಪಯಸ್ವಿನಿ (ರಿ) ಇವರ ಜಂಟಿ ಆಶ್ರಯದಲ್ಲಿ ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಈ “4ನೇ ಬೃಹತ್ ರಕ್ತದಾನ ಶಿಬಿರ” ನಡೆಯಲಿದೆ.
ಶಿಬಿರದ ವಿವರಗಳು:
- ದಿನಾಂಕ: 13-06-2026, ಶನಿವಾರ
- ಸಮಯ: ಬೆಳಿಗ್ಗೆ 09.30 ರಿಂದ ಮಧ್ಯಾಹ್ನ 01.00 ರ ತನಕ
- ಸ್ಥಳ: ಸುಳ್ಯ ತಾಲೂಕು ಸರ್ಕಾರಿ ಆಸ್ಪತ್ರೆ
ಸಾರ್ವಜನಿಕರು ಹಾಗೂ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಈ ಜೀವದಾನದ ಮಹತ್ಕಾರ್ಯವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9880638108 ಅನ್ನು ಸಂಪರ್ಕಿಸಬಹುದಾಗಿದೆ.







