ಸುಳ್ಯದ ಜಯನಗರದ ನಿವಾಸಿಯಾದ, ಮೂಲತಃ ಕಲ್ಲುಗುಂಡಿ ಚೆಂಬು ತಾಮರಕಟ್ಟೆಯವರಾದ ಶಿವರಾಮ್ (50 ವರ್ಷ) ಅವರು ಜೂನ್ 11 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ರಾತ್ರಿ ಮನೆಯಲ್ಲಿ ಊಟಕ್ಕೆ ಕುಳಿತಿದ್ದ ಸಂದರ್ಭದಲ್ಲಿ ಅವರು ತೀವ್ರವಾಗಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಕೆ.ವಿ.ಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಇವರು ಸುಳ್ಯದ ಬಾಳಮಕ್ಕಿಯಲ್ಲಿ ಗೂಡ್ಸ್ ಆಟೋ ಚಾಲಕರಾಗಿ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಚೆಂಬು ಮನೆಯಲ್ಲಿ ಬೆಳಿಗ್ಗೆ ನಡೆಯಲಿದೆ.








