
ಸುಳ್ಯ: ಮಂಡೆಕೋಲು ಹಾಗೂ ಅಡ್ಪಂಗಾಯ ನಡುವಿನ ಭಾಗದಲ್ಲಿ ಇಂದು ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಭಾರೀ ಗಾಳಿ ಮತ್ತು ಮಳೆಯ ಆರ್ಭಟಕ್ಕೆ ವ್ಯಾಪಕ ಹಾನಿ ಸಂಭವಿಸಿದೆ.
ಇಲ್ಲಿನ ಪರಿಸರದಲ್ಲಿ ತೀವ್ರ ಗಾಳಿಗೆ ಬೃಹತ್ ಮರವೊಂದು ಧರೆಗುರುಳಿದೆ. ಇದರೊಂದಿಗೆ ಮತ್ತೊಂದೆಡೆ ತೀವ್ರ ಗಾಳಿಯ ರಭಸಕ್ಕೆ ಸಿಲುಕಿ 4 ವಿದ್ಯುತ್ ಕಂಬಗಳು ಹಾಗೂ ಒಂದು ವಿದ್ಯುತ್ ಟ್ರಾನ್ಸ್‌ಫಾರ್ಮರ್ (Transformer ನೆಲಕ್ಕಿರುಳಿವೆ. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಸಂಚಾರ ಹಾಗೂ ವಿದ್ಯುತ್ ವ್ಯತ್ಯಯ:
ಮರ ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮವಾಗಿ ಈ ಭಾಗದಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಅಲ್ಲದೆ, ಟ್ರಾನ್ಸ್‌ಫಾರ್ಮರ್ ಹಾಗೂ ಕಂಬಗಳು ಮುರಿದು ಬಿದ್ದಿರುವುದರಿಂದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಸ್ಥಳೀಯರು ಮೆಸ್ಕಾಂ (MESCOM) ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.







