ಕಾರ್ಯಕರ್ತರಿಗೆ ಆದ್ಯತೆ,ತನಗೆ ನೀಡಿದ ಶಾಲನ್ನು ಮರಳಿ ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷ ಮುಸ್ತಫ ರಿಗೆ ಹಾಕಿ ಸರಳತೆ ಮೆರೆದ ಜನ ನಾಯಕ

ಕೆಪಿಸಿಸಿ ಅಧ್ಯಕ್ಷ ರಾಗಿ ಇತ್ತೀಚಿಗೆ ಅಧಿಕಾರ ವಹಿಸಿಕೊಂಡ ಬಿ. ಕೆ. ಹರಿಪ್ರಸಾದ್ ರವರು ಪ್ರಥಮ ಬಾರಿಗೆ ಇಂದು ಮಂಗಳೂರಿಗೆ ಆಗಮಿಸಿ ಕಾರ್ಯಕರ್ತರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ ರವರು ಬಿ ಕೆ ಹರಿಪ್ರಸಾದ್ ರವರಿಗೆ ಶಾಲು ಹೊದಿಸಿ ಸನ್ಮಾನಿಸಲು ಮುಂದಾದಾಗ ಸರಳತೆ ಮೆರೆದ ಅವರು ಆ ಶಾಲನ್ನು ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷ ಮುಸ್ತಫ ಅವರಿಗೆ ಹಾಕಿ ಮೊದಲು ಕಾರ್ಯಕರ್ತರಿಗೆ ಆದ್ಯತೆ ಎಂದು ಸರಳತೆಯನ್ನು ಮೆರೆದರು.
ಈ ಸಂದರ್ಭದಲ್ಲಿ ಕೆಪೆಕ್ ನಿಗಮದ ಮಾಜಿ ನಿರ್ದೇಶಕ ಪಿ. ಎ. ಮಹಮ್ಮದ್, ಜಾಲ್ಸೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಬ್ದುಲ್ ಮಜೀದ್, ಸುಳ್ಯ ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಶಹೀದ್ ಪಾರೆ ಮೊದಲಾದವರು ಉಪಸ್ಥಿತರಿದ್ದರು.
ಓರ್ವ ಧೀಮಂತ ನಾಯಕನ ಈ ಸರಳತೆಯನ್ನು ನೋಡಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *