ಸುಳ್ಯ: ತಾಲೂಕಿನ ಕಾಂತಮಂಗಲ ಬಳಿಯ ನದಿಯಲ್ಲಿ ಮೊಸಳೆಯೊಂದು ಕಾಣಿಸಿಕೊಂಡಿರುವ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದರಿಂದ ಸುತ್ತಮುತ್ತಲಿನ ನಿವಾಸಿಗಳಲ್ಲಿ ತೀವ್ರ ಆತಂಕ ಮನೆಮಾಡಿದೆ.
ಈ ಬಗ್ಗೆ  ಪ್ರತಿಕ್ರಿಯಿಸಿರುವ ಪೈಚಾರ್‌ನ ‘ಕಾರುಣ್ಯ ಚಾರಿಟೇಬಲ್ ಟ್ರಸ್ಟ್’ ಅಧ್ಯಕ್ಷರು ಹಾಗೂ ಮುಳುಗು ತಜ್ಞರ ತಂಡದ ಸದಸ್ಯ, ಶ್ರೀ ಬಷೀರ್ ಆರ್.ಬಿ. ಅವರು, ಜನರ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸದಾ ಸಾರ್ವಜನಿಕರ ಪರವಾಗಿ ನಿಲ್ಲುವ ಅವರು, ಆಡಳಿತವು ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ತಿಳಿಸಿದ್ದಾರೆ.
“ಸಾರ್ವಜನಿಕರ ಜೀವಕ್ಕೆ ಅಪಾಯ ಎದುರಾಗುವ ಮುನ್ನ ತಾಲೂಕು ಆಡಳಿತ ತಕ್ಷಣವೇ ಎಚ್ಚೆತ್ತುಕೊಳ್ಳಬೇಕು. ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆ ಹಾಗೂ ಇತರ ಅಧಿಕಾರಿಗಳಿಗೆ ಮಾಹಿತಿ ನೀಡಿ, ಮೊಸಳೆಯನ್ನು ಅಲ್ಲಿಂದ ಹಿಡಿದು ಬೇರೆಡೆಗೆ ಸ್ಥಳಾಂತರಿಸಲು ಕಾರ್ಯಾಚರಣೆ ನಡೆಸಬೇಕು. ಆ ಮೂಲಕ ಸಾರ್ವಜನಿಕರ ಆತಂಕವನ್ನು ದೂರ ಮಾಡಬೇಕು” ಎಂದು ಹೇಳಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *