ಅರಂತೋಡು: ಬಸ್ ಹತ್ತಲು ರಸ್ತೆ ದಾಟುತ್ತಿದ್ದ ನೆಹರೂ ಮೆಮೋರಿಯಲ್ ಕಾಲೇಜು ಅರಂತೋಡು (NMC) ಪಿಯುಸಿ ವಿದ್ಯಾರ್ಥಿ ಸಚಿನ್ ಎಂಬುವವನಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗೆ ಗಾಯಗಳಾಗಿರುವ ಘಟನೆ ಅರಂತೋಡಿನಲ್ಲಿ ನಡೆದಿದೆ.
ವಿದ್ಯಾರ್ಥಿಯು ಬಸ್ ಹತ್ತುವ ಉದ್ದೇಶದಿಂದ ರಸ್ತೆ ದಾಟುತ್ತಿದ್ದಾಗ, ಬರುತ್ತಿದ್ದ ಆಟೋ ರಿಕ್ಷಾವನ್ನು ಗಮನಿಸಿರಲಿಲ್ಲ ಎನ್ನಲಾಗಿದೆ. ಡಿಕ್ಕಿಯಾದ ರಭಸಕ್ಕೆ ವಿದ್ಯಾರ್ಥಿಯ ತಲೆಗೆ ಗಾಯಗಳಾಗಿದ್ದು, ತಕ್ಷಣವೇ ಆತನನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *