ಅರಂತೋಡು: 78ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮತ್ತು
ಎಸ್ ಎಸ್ ಎಲ್ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಗೌರವಾರ್ಪಣೆ ನಡೆಸಲಾಯಿತು. 2023-24 ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಮತ್ತು ಗಣಕ ವಿಜ್ಞಾನ ವಿಭಾಗ 100 ಶೇಕಡಾ ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗ 99 ಶೇಕಡಾ ಮತ್ತು ಎಸ್ಸೆಸ್ಸೆಲ್ಸಿ 97 ಶೇಕಡಾ ಫಲಿತಾಂಶ ದಾಖಲಿಸಿದೆ.ಈ ಪರೀಕ್ಷೆಯಲ್ಲಿ 43 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗೆ ಶಾಲು ಸ್ಮರಣಿಕೆ ನೀಡಿ, ಕಾರ್ಯಕ್ರಮದ ಅಧ್ಯಕ್ಷರಾದ ಕೆ ಆರ್ ಗಂಗಾಧರ್, ಮುಖ್ಯ ಅತಿಥಿಗಳಾದ ನಿವೃತ್ತ ಮುಖ್ಯೋಪಾಧ್ಯಾಯ ಪುರುಷೋತ್ತಮ ಕಿರ್ಲಾಯ, ನಿವೃತ್ತ ಯೋಧ ಹುಕ್ರಪ್ಪ ಗೌಡ ಮತ್ತು ಪ್ರಭಾಕರ ರೈ ಪೆರಾಜೆ ಗೌರವಿಸಿದರು. ಮುಖ್ಯೋಪಾಧ್ಯಾಯರಾದ ಸೀತಾರಾಮ ಎಂ.ಕೆ , ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಅಶ್ವಿನಿ, ಭಾಗ್ಯಶ್ರೀ ಮತ್ತು ಲಿಂಗಪ್ಪ ಮತ್ತು ಮನೋಜ್ ಸಹಕರಿಸಿದರು.