ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಎಒಎಲ್ ಇ (ರಿ) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ. ಚಿದಾನಂದರನ್ನು ಆಮಂತ್ರಣ ಪತ್ರ ನೀಡಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ, ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಹಿಮಕರ ಎ ಕೆ, ವಿಚಾರ ಸಂಕಿರಣದ ಸಂಯೋಜಕಿ ಡಾ. ಅನುರಾಧಾ ಕುರುಂಜಿ, ಸಹ ಸಂಯೋಜಕ ಸಂಜೀವ ಕುದ್ಪಾಜೆ ಉಪಸ್ಥಿತರಿದ್ದರು.