ಪೈಚಾರಿನಲ್ಲಿ ಸೆ.1ರಂದು ಮಧ್ಯಾಹ್ನ ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಬೈಕಿನಲ್ಲಿ ಸಹ ಸವಾರರಾಗಿದ್ದ ಮಹಿಳೆ ರಸ್ತೆಗೆ ಬಿದ್ದಿದ್ದು ಕೂಡಲೆ ಸ್ಥಳೀಯರು ಅವರನ್ನು ಚಿಕಿತ್ಸೆಗಾಗಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದರು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ(ಸೆ.೧) ದಿನ ಸಂಜೆ ಸುಮಾರು ಆರು ಗಂಟೆಯ ವೇಳೆಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಮಹಿಳೆ ಉತ್ತರ ಕರ್ನಾಟಕ ಮೂಲದ ಯಲಬುರ್ಗಿ ತಾಲೂಕಿನವರು ಎಂದು ತಿಳಿದು ಬಂದಿದೆ. ಅವರು ಸುಳ್ಯದಲ್ಲಿ ಕಳೆದ ಹಲವಾರು ವರ್ಷಗಳಿಂದ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಸೆ.1ರಂದು ಮಧ್ಯಾಹ್ನ ಕೆಲಸದ ನಿಮಿತ್ತ ಎಲ್ಲಪ್ಪ ಎಂಬುವವರ ಜೊತೆ ಪೈಚಾರು ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಪೈಚಾರು ರಸ್ತೆಯ ಬದಿಯಲ್ಲಿದ್ದ ಸ್ಕೂಟಿ ವಾಹನ ಸವಾರ ಸುಳ್ಯದತ್ತ ಬರಲು ವಾಹನ ತಿರಿಗಿಸಿವ ಸಂಧರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.