ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಮಾಂಙಾಡ್ ನಲ್ಲಿ ನಡೆದಿದೆ. ಉದುಮ ಪಳ್ಳದ ತೆಕ್ಕೇಕರೆಯ ಮಾಹಿನ್ ರಾಸಿ – ರೆಹಿಮಾ ದಂಪತಿ ಪುತ್ರ ಅಬು ತ್ವಾಹೀರ್ ಮೃತ ಪಟ್ಟ ಮಗು ಎಂದು ಗುರುತಿಸಲಾಗಿದೆ. ಮಾಂಙಾಡ್ ನ ಸಂಬಂಧಿಕರ ಮನೆಯಲ್ಲಿ ಈ ಘಟನೆ ನಡೆದಿದೆ.

ಆಟವಾಡುತ್ತಿದ್ದ ಈತನ ಮೇಲೆ ಕಬ್ಬಿಣದ ಗೇಟ್ ಬಿದ್ದಿದ್ದು, ಅದರಡಿ ಸಿಲುಕಿದ್ದು, ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Leave a Reply

Your email address will not be published. Required fields are marked *