ಮಂಗಳೂರು: ಉದ್ಯಮಿ, ಸಮಾಜ ಸೇವಕ, ಪ್ರತಿಷ್ಠಿತ  A K ಸಮೂಹ ಸಂಸ್ಥೆಗಳ ಸ್ಥಾಪಕ A K ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.ಸರಳ ಸಜ್ಜನ ವ್ಯಕ್ತಿತ್ವದ ಪರೋಪಕಾರಿ ಮನೋಭಾವದವರು,  ಹೈಲ್ಯಾಂಡ್ ನ ಇಹ್ಸಾನ್ ಮಸೀದಿಯ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದರು.  A K ಗ್ರೂಪ್ ಅನ್ನು ಪ್ರಾರಂಭಿಸಿ ಯಶಸ್ಸಿನ ಉತ್ತುಂಗಕ್ಕೆ ಒಯ್ದು ಪ್ರತಿಷ್ಠಿತ ಬ್ರ್ಯಾಂಡ್ ಆಗಿ ಪರಿವರ್ತಿಸುವಲ್ಲಿ ಅಹ್ಮದ್ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು. ಅವರು ಪತ್ನಿ,ನಾಲ್ಕು ಗಂಡು ಮಕ್ಕಳು ಹಾಗು ಮೂರು ಹೆಣ್ಣು ಮಕ್ಕಳು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. A K ಅಹ್ಮದ್ ಅವರ ನಿಧನಕ್ಕೆ ಸಮಾಜದ ಗಣ್ಯರು , ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *