ಸುಳ್ಯ ತಾಲ್ಲೂಕು ಐವರ್ನಾಡು ಗ್ರಾಮದ ಕೃಷಿಕರಾದ ಸಿ. ಕೆ. ನವೀನ್ ಚಾತುಬಾಯಿಯವರೀಗೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಶ್ರೇಷ್ಠ ಪ್ರಗತಿಪರ ರೈತ ಪ್ರಶಸ್ತಿ ದೊರೆತಿದೆ.
ಶಿವಮೊಗ್ಗದ ನವುಲೆ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 18 ರಿಂದ 24ರ ವರೆಗೆ ನಡೆದ ಕೃಷಿ ಮತ್ತು ತೋಟಗಾರಿಕೆ ಮೇಳ 2024ರಲ್ಲಿ ಸಮಗ್ರ ಕೃಷಿಯಲ್ಲಿ ಸಾಧಿಸಿದ ಪ್ರಗತಿಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಮಟ್ಟದ ಶ್ರೇಷ್ಠ ಪ್ರಗತಿಪರ ರೈತ ಪ್ರಶಸ್ತಿ ಹಾಗೂ ನಗದು ಬಹುಮಾನವನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಶಾಸಕರಾದ ಅರಗ ಜ್ಞಾನೇಂದ್ರ, ಗೋಪಾಲಕೃಷ್ಣ ಬೇಳೂರು, ಬಲ್ಕಿಷ್ ಬಾನು,ವಿ. ವಿ. ಕುಲಪತಿಗಳಾದ ಡಾ. ಆರ್.ಸಿ. ಜಗದೀಶ್, ಎಸ್. ಎನ್.ಚೆನ್ನಪ್ಪ ಮುಂತಾದ ಗಣ್ಯರುಗಳು ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ನೆರವೇರಿಸಿದರು.