ಸುಳ್ಯದಿಂದ ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುವ ಸ್ಲೀಪರ್ ಕೋಚ್ ಬಸ್ ತುಂಬಾ ಹಳೆಯದಾಗಿದ್ದು ಹೊಸ ಬಸ್ ನಿಯೋಜಿಸುವಂತೆ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಯವರಿಗೆ ಮನವಿ ಸಲ್ಲಿಸಲಾಗಿತ್ತು.
ಮನವಿಗೆ ತಕ್ಷಣ ಸ್ಪಂದಿಸಿದ ಸಾರಿಗೆ ಸಚಿವರು ಹೊಸ ಬಸ್ ನಿಯೋಜನೆಗೆ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಬೆಂಗಳೂರು ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದರು, ಇದರ ಫಲಶ್ರುತಿ ಎಂಬಂತೆ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿಯವರಿಗೆ ಕೇಂದ್ರ ಕಚೇರಿಯಿಂದ ಪತ್ರ ರವಾನಿಸಿದ್ದು ಹೊಸ ಬಸ್ ನಿಯೋಜಿಸುವಂತೆ ಸೂಚಿಸಲಾಗಿದೆ
ಜಿಲ್ಲೆಯ ಪ್ರಮುಖ ಶೈಕ್ಷಣಿಕ, ವಾಣಿಜ್ಯ ಮತ್ತು ಧಾರ್ಮಿಕ ಕೇಂದ್ರಗಳ ಪ್ರದೇಶ ವಾಗಿದ್ದು ಸುಳ್ಯ ದಿಂದ ಬೆಂಗಳೂರಿಗೆ ರಾತ್ರೆ ಹೊರಡುವ ಬಸ್ ಗಳ ಬದಲಾವಣೆ ಅತೀ ಅವಶ್ಯ ಎಂದು ಮನವಿಯಲ್ಲಿ ತಿಳಿಸಲಾಗಿತ್ತು