ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಅದ್ದೂರಿಯಾಗಿ ಮತ್ತು ಸಾಂಪ್ರದಾಯಿಕವಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ನವೆಂಬರ್ 14ನೇ ಗುರುವಾರದಂದು ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ತಾಸೆ ಬಡಿಯುವುದರ ಮೂಲಕ ಸಾಂಪ್ರದಾಯಿಕವಾಗಿ ಉದ್ಘಾಟಿಸಿದರು.

ಈ ಸಂದರ್ಭ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ ರುದ್ರಕುಮಾರ್ ಎಂ.ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಮಮತಾ ಕೆ, ಸಾ೦ಸ್ಕೃತಿಕ ಸಂಘದ ಸಂಚಾಲಕ ವಿಷ್ಣುಪ್ರಶಾಂತ್ ಮತ್ತು ಸದಸ್ಯರು ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಉಪನ್ಯಾಸಕ ಹರಿಪ್ರಸಾದ್ ಅತ್ಯಾಡಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಭರತನಾಟ್ಯ, ಮೋಹಿನಿಯಾಟ್ಟಂ, ತಿರುವಾದಿರ, ಜಾನಪದ ನೃತ್ಯ, ಯಕ್ಷಗಾನ, ಸೇರಿದಂತೆ ಸಾಂಸ್ಕೃತಿಕ ವೈವಿಧ್ಯಕ್ಕೆ ವೇದಿಕೆ ಸಾಕ್ಷಿಯಾಯಿತು. ಈ ಸಂದರ್ಭ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಭೋದಕ ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *