ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ (ಡಿಸೆಂಬರ್ 3) ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವುದರಿಂದ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಕೆ ಇಂಪಾಶೇಖರ್ ರಜೆ ಘೋಷಿಸಿದ್ದಾರೆ. ಟ್ಯೂಷನ್ ಸೆಂಟರ್ಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೂ ರಜೆ ಅನ್ವಯಿಸುತ್ತದೆ.
ಹವಾಮಾನ ಇಲಾಖೆಯು 24 ಗಂಟೆಗಳಲ್ಲಿ 204.4 ಮಿಮೀ ಗಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಭಾರೀ ಮಳೆಯು ಹಠಾತ್ ಪ್ರವಾಹಕ್ಕೆ ಕಾರಣವಾಗಬಹುದು. ಹಾಗೂ ನಗರ ಮತ್ತು ತಗ್ಗು ಪ್ರದೇಶಗಳಲ್ಲೂ ಜಲಾವೃತವಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿವೆ.
ನಿರಂತರ ಮಳೆಯು ಭೂಕುಸಿತಗಳನ್ನು ಉಂಟು ಮಾಡುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಅತ್ಯಂತ ಜಾಗರೂಕತೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.