ಗುರುಗಳ ಸಾಮಾಜಿಕ, ,ಶೈಕ್ಷಣಿಕ ಮತ್ತು ಸಂಘಟನಾತ್ಮಕ ಅಭಿವೃದ್ಧಿ ಯ ಪರಿಕಲ್ಪನೆ ಇಂದಿಗೂ ಪ್ರಸ್ತುತ : ಟಿ. ಎಂ. ಶಹೀದ್ ತೆಕ್ಕಿಲ್
18 ನೇ ಶತಮಾನದ ಸಮಾಜ ಸುಧಾರಕರಾದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆ ಸುಳ್ಯ ತಾಲೂಕು ಕಚೇರಿ ಸಭಾಂಗಣ ದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ ವಹಿಸಿದ್ದರು. ಕಾರ್ಯಕ್ರಮ ವನ್ನು ಉದ್ಘಾಟಿಸಿದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ. ಎಂ ಶಹೀದ್ ತೆಕ್ಕಿಲ್ ಮಾತನಾಡಿ ಅಸಮಾನತೆ, ಅಸ್ಪೃಶ್ಯತೆ ವಿರುದ್ಧ ಆಂದೋಲನ ಮಾಡಿದ ದೇಶದಲ್ಲಿ ಧರ್ಮ ಜಾಗೃತಿ ಮೂಲಕ ಮಹಾನ್ ಸಮಾಜ ಸುಧಾರಕ ರಾದವರು ಎಂದರು. ವೇದಿಕೆಯಲ್ಲಿ ತಾಲೂಕು ತಹಶೀಲ್ದಾರ್, ತಾಲೂಕು ರಾಷ್ಟ್ರೀಯ ಹಬ್ಬಗಳ ಆಚಾರಣಾ ಸಮಿತಿ ಅಧ್ಯಕ್ಷೆ ಶ್ರೀಮತಿ ಮಂಜುಳಾ, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಎಸ್. ಹರಗಿ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣಕುಮಾರ್, ಸ್ಥಾಪಕಾಧ್ಯಕ್ಷ, ನಿವೃತ್ತ ಡಿ ಟಿ ಜನಾರ್ಧನ ಪೂಜಾರಿ, ಪದಾಧಿಕಾರಿಗಳಾದ ಸೋಮನಾಥ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು
ತಾಲೂಕು ಕಚೇರಿಯ ಕಾರ್ತಿಕ್, ಸ್ವಾಗತಿಸಿ, ಉಪ ತಹಶೀಲ್ದಾರ್ ಚಂದ್ರಕಾಂತ್ ವಂದಿಸಿದರು.
