ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (LoC) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದಿದೆ. ಐವರು ಸೈನಿಕರು ಹುತಾತ್ಮರಾಗಿದ್ದು, ಅನೇಕ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಹಿತಿ ಪಡೆದ ಸೇನಾಧಿಕಾರಿಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡುತ್ತಿದ್ದಾರೆ.
ಕಳೆದ ತಿಂಗಳು, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇದೇ ರೀತಿಯ ಅಪಘಾತದಲ್ಲಿ, ಸೇನಾ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದರು ಮತ್ತು ಇನ್ನೊಬ್ಬರು ಗಾಯಗೊಂಡಿದ್ದರು.