ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನಮೋಹನ್‌ ಸಿಂಗ್‌ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು.

ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು. ಈ ಬಗ್ಗೆ ರಾಬರ್ಟ್‌ ವಾದ್ರಾ ಟ್ವೀಟ್ ಮಾಡಿದ್ದು, “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಗಿದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು. ನಮ್ಮ ದೇಶಕ್ಕೆ ನೀವು ಮಾಡಿದ ಸೇವೆಗೆ ಧನ್ಯವಾದಗಳು. ನಿಮ್ಮ ಆರ್ಥಿಕ ಕ್ರಾಂತಿಗಾಗಿ ನೀವು ಯಾವಾಗಲೂ ನೆನಪಿನಲ್ಲಿರುತ್ತೀರಿ ಮತ್ತು ಪ್ರಗತಿಪರ ಬದಲಾವಣೆಗಳನ್ನು ನೀವು ದೇಶಕ್ಕೆ ತಂದಿದ್ದೀರಿ’ ಎಂದು ಬರೆದುಕೊಂಡಿದ್ದಾರೆ.

ಆದರೆ, ಟ್ವೀಟ್‌ಪೋಸ್ಟ್‌ ಮಾಡಿದ ಕೆಲ ಹೊತ್ತಿನಲ್ಲಿ ಅದನ್ನು ಡಿಲೀಟ್‌ ಕೂಡ ಮಾಡಿದ್ದರಾದರೂ, ಇದನ್ನು ಎಎನ್‌ಐ ಪೋಸ್ಟ್‌ ಮಾಡಿದೆ. ವಯನಾಡ್‌ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಏಮ್ಸ್‌ ಆಸ್ಪತ್ರೆಗೆ ಆಗಮಿಸಿದ್ದಾರೆ. ಏಮ್ಸ್‌ ಆಸ್ಪತ್ರೆ ಅಧಿಕೃತವಾಗಿ ಘೋಷಣೆ ಮಾಡುವ ಮುನ್ನವೇ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಸುಧಾಕರ್‌ ಮನಮೋಹನ್‌ ಸಿಂಗ್‌ ನಿಧನದ ಬಗ್ಗೆ ಸುದ್ದಿಗಳನ್ನು ಹಂಚಿಕೊಂಡಿದ್ದರು. ಬಳಿಕ ಕಾಂಗ್ರೆಸ್‌ ಮುಖವಾಣಿ ನ್ಯಾಷನಲ್‌ ಹೆರಾಲ್ಡ್‌ ಈ ಸುದ್ದಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದೆ.

Leave a Reply

Your email address will not be published. Required fields are marked *