ಸುವರ್ಣ ಮಹೋತ್ಸವದ ಸಂಭ್ರಮಕ್ಕೆ ಸಜ್ಜಗುತ್ತಿರುವ ಎನ್.ಎಂ.ಸಿ.ಯಲ್ಲಿ ಮಂಗಳೂರು ವಿವಿ ಅಂತರ್ ಕಾಲೇಜು ಗುಡ್ಡಗಾಡು ಓಟ ಚಾಂಪಿಯನ್ ಶಿಪ್

News

ಸೆ.18–19ರಂದು ಸುಳ್ಯದಲ್ಲಿ ಕ್ರೀಡಾ ಸಂಭ್ರಮ

40ಕ್ಕೂ ಅಧಿಕ ಕಾಲೇಜುಗಳಿಂದ ಕ್ರೀಡಾಪಟುಗಳು ಭಾಗವಹಿಸುವಿಕೆ ನಿರೀಕ್ಷೆ

ಸುಳ್ಯ, ಸೆಪ್ಟೆಂಬರ್ 10:
ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆ 2026-27ನ್ನು ಸೆಪ್ಟೆಂಬರ್ 18 ಮತ್ತು 19ರಂದು ಆಯೋಜಿಸುತ್ತಿದೆ. ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಸುಮಾರು 40 ಕಾಲೇಜುಗಳ ತಂಡಗಳಳಿಂದ ಸುಮಾರು 230ಕ್ಕೂ ಅಧಿಕ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಈ ಪ್ರತಿಷ್ಠಿತ ಚಾಂಪಿಯನ್ಶಿಪ್‌ನಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸ್ಪರ್ಧೆಯು ಯುವ ಕ್ರೀಡಾಪಟುಗಳ ಸಾಮರ್ಥ್ಯ, ಸಹನಶಕ್ತಿ ಮತ್ತು ಕ್ರೀಡಾ ಮನೋಭಾವಕ್ಕೆ ವೇದಿಕೆಯಾಗಲಿದೆ.

ಪುರುಷರ ವಿಭಾಗದ ವಿಜೇತರಿಗೆ ಶ್ರೀ ಕುರುಂಜಿ ವಿಶ್ವನಾಥ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿ ಹಾಗೂ ಮಹಿಳೆಯರ ವಿಭಾಗದ ವಿಜೇತರಿಗೆ ಕೈಕುರೆ ಶ್ರೀ ರಾಮಣ್ಣ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿ ಪ್ರದಾನ ಮಾಡಲಿದ್ದು ಚಾಂಪಿಯನ್ಶಿಪ್‌ನ ಉದ್ಘಾಟನಾ ಸಮಾರಂಭವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಅವರು ನೆರವೇರಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯದ ಉಪಾಧ್ಯಕ್ಷೆ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ, ಕಾರ್ಯದರ್ಶಿ ಕುರುಂಜಿ ಹೇಮನಾಥ ಗೌಡ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ ವಿ, ಸುಳ್ಯ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಉದಯರವಿ ಹಾಗೂ ಮಂಗಳೂರು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಸಂತೋಷ್ ಜೆರಾಲ್ಡ್ ಡಿಸೋಜಾ ಸೇರಿದಂತೆ ಗಣ್ಯರು ಉಪಸ್ಥಿತರಿರುವರು.

ಎರಡು ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟವನ್ನು ಸುಸೂತ್ರವಾಗಿ ನಡೆಸಲು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಕ್ಯಾಪ್ಟನ್ ಸೀತಾರಾಮ ಎಂ.ಡಿ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಕ್ರೀಡಾ ಸಮಿತಿ, ವಿದ್ಯಾರ್ಥಿ ಸ್ವಯಂಸೇವಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ನೆಹರೂ ಮೆಮೋರಿಯಲ್ ವಿಶೇಷವಾಗಿ ಪುರುಷರ ವಿಭಾಗದ ರೋಲಿಂಗ್ ಟ್ರೋಫಿ ಈ ಹಿಂದೆ ಕುರುಂಜಿ ಮನೆತನದಿಂದಲೇ ಸ್ಥಾಪಿತವಾಗಿದ್ದು, ಕಾಲೇಜಿನ ಸುವರ್ಣ ಮಹೋತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡುವ ಈ ವಿಶ್ವವಿದ್ಯಾಲಯ ಮಟ್ಟದ ಕ್ರೀಡಾಕೂಟವು ಸುಳ್ಯದ ಕ್ರೀಡಾ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲಾಗಲಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *