ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಎನ್.ಎಂ.ಸಿ.ಯಲ್ಲಿ ಮಂಗಳೂರು ವಿವಿ ಅಂತರ್ ಕಾಲೇಜು ಗುಡ್ಡಗಾಡು ಓಟ ಚಾಂಪಿಯನ್ ಶಿಪ್

News Sports

ಆಳ್ವಾಸ್ ಕಾಲೇಜು ಮೂಡಬಿದ್ರಿ: ಚಾಂಪಿಯನ್ಸ್, ಎಸ್.ಡಿ.ಎಂ ಕಾಲೇಜು ಉಜಿರೆ: ರನ್ನರ್ಸ್, ಎನ್.ಎಂ.ಸಿ. ಸುಳ್ಯ ಮತ್ತು ಜಿ.ಎಫ್.ಜಿ.ಸಿ ಬೆಳ್ತಂಗಡಿ: ತೃತೀಯ

ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇವರ ಸಹಯೋಗದಲ್ಲಿ, ಎಒಎಲ್‌ಇ (ರಿ.) ಸುಳ್ಯ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್ 2026 ಸೆಪ್ಟೆಂಬರ್ 19ರಂದು ನೆಹರು ಮೆಮೋರಿಯಲ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಕುರುಂಜಿ ವಿಶ್ವನಾಥ ಗೌಡ ಸ್ಮಾರಕ ರೋಲಿಂಗ್ ಟ್ರೋಫಿ (ಪುರುಷರು) ಹಾಗೂ ಕೈಕುರೆ ಶ್ರೀ ರಾಮಣ್ಣ ಗೌಡ ಸ್ಮಾರಕ ಟ್ರೋಫಿ (ಮಹಿಳೆಯರು)ಗಾಗಿ ನಡೆದ ಚಾಂಪಿಯನ್‌ಶಿಪ್‌ಗೆ ಎಒಎಲ್‌ಇ (ರಿ.) ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದರವರು ಬೆಳಿಗ್ಗೆ 6.30ಕ್ಕೆ ಹಸಿರು ಧ್ವಜ ತೋರಿಸಿ ಚಾಲನೆ ನೀಡಿದರು.

ಗುಡ್ಡಗಾಡು ಓಟದ ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ ಮಾತನಾಡಿ ಕ್ರೀಡೆಗೆ ವಯಸ್ಸಿನ ಹಂಗಿಲ್ಲ; ಕ್ರೀಡೆಯಲ್ಲಿ ನಿರಂತರ ಆಸಕ್ತಿ, ಶಿಸ್ತು, ದೈಹಿಕ ಸದೃಢತೆ ಮತ್ತು ಪರಿಶ್ರಮ ಮುಖ್ಯ. ಹಿಂದಿನ ಸಾಧನೆಗಳಲ್ಲೇ ತೃಪ್ತಿಪಡದೆ, ಪ್ರತಿಯೊಂದು ಸ್ಪರ್ಧೆಯಲ್ಲೂ ಹಿಂದಿನ ಸಾಧನೆಗಿಂತ ಉತ್ತಮ ಸಾಧನೆ ಮಾಡುವ ಗುರಿಯೊಂದಿಗೆ ಅಭ್ಯಾಸ ಮಾಡಬೇಕು. ಕ್ರೀಡೆ ಕೇವಲ ಗೆಲುವು-ಸೋಲಿನ ಸ್ಪರ್ಧೆಯಲ್ಲ. ಅದು ದೈಹಿಕ ಆರೋಗ್ಯ, ಮಾನಸಿಕ ದೃಢತೆ, ಆತ್ಮವಿಶ್ವಾಸ, ಶಿಸ್ತು ಮತ್ತು ಕ್ರೀಡಾಸ್ಫೂರ್ತಿಯನ್ನು ಬೆಳೆಸುವ ಪ್ರಮುಖ ಮಾಧ್ಯಮ. ನಿರಂತರ ಆಸಕ್ತಿ, ನಿರಂತರ ಅಭ್ಯಾಸ, ನಿರಂತರ ಪ್ರಯತ್ನ, ನಿರಂತರ ಸಾಧನೆ ಎಂಬ ಆಶಯದೊಂದಿಗೆ ಕ್ರೀಡಾಪಟುಗಳು ಮುನ್ನಡೆಯಬೇಕು ಎಂದರು.

ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಎಒಎಲ್‌ಇ (ರಿ.) ಸುಳ್ಯದ ಕಾರ್ಯದರ್ಶಿ ಹೇಮನಾಥ ಕುರುಂಜಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಕೆವಿಜಿ ಕಾನೂನು ಕಾಲೇಜಿನ ಆಡಳಿತ ಅಧಿಕಾರಿ ಪ್ರೊ. ದಾಮೋದರ ಕೆ, ಎನ್.ಎಂ.ಸಿ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಕೆ.ಟಿ. ವಿಶ್ವನಾಥ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಧರ ವಿ, ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ರಾಜೇಂದ್ರ, ಮತ್ತು ಎನ್‌.ಎಂ.ಸಿ ದೈಹಿಕ ಶಿಕ್ಷಣ ನಿರ್ದೇಶಕ ಕ್ಯಾಪ್ಟನ್ ಸೀತಾರಾಮ ಎಂ.ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿ, ಬಹುಮಾನ ವಿಜೇತರ ಪಟ್ಟಿಯನ್ನು ಸರಕಾರಿ ಪದವಿ ಕಾಲೇಜು ಬೆಟ್ಟಂಪಾಡಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಮಚಂದ್ರ ಕೆ ವಾಚಿಸಿದರು. ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ. ವಂದಿಸಿದರು. ಆಂಗ್ಲಭಾಷಾ ವಿಭಾಗ ಮುಖ್ಯಸ್ಥೆ ಭವ್ಯ ಪಿ ಎಂ ಮತ್ತು ಸಸ್ಯಾಶಾಸ್ತ್ರ ಉಪನ್ಯಾಸಕಿ ಕೃತಿಕಾ ಕೆ ಜೆ ಕಾರ್ಯಕ್ರಮ ನಿರೂಪಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್ 2026–27ರ ಪುರುಷರ ವಿಭಾಗದ ಶ್ರೀ ಕುರುಂಜಿ ವಿಶ್ವನಾಥ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಆಳ್ವಾಸ್ ಕಾಲೇಜು ಮೂಡಬಿದ್ರಿ ಪಡೆದುಕೊಂಡು, ಉಜಿರೆಯ ಎಸ್‌ಡಿಎಂ ಕಾಲೇಜು ದ್ವಿತೀಯ ಸ್ಥಾನ ಹಾಗೂ ಅತಿಥೆಯ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜು ತೃತೀಯ ಸ್ಥಾನ ಪಡೆದುಕೊಂಡಿವೆ. ಮಹಿಳೆಯರ ವಿಭಾಗದ ಕೈಕುರೆ ಶ್ರೀ ರಾಮಣ್ಣ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿಯಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಪ್ರಥಮ, ಉಜಿರೆಯ ಎಸ್‌ಡಿಎಂ ಕಾಲೇಜು ದ್ವಿತೀಯ ಹಾಗೂ ಬೆಳ್ತಂಗಡಿಯ ಸರ್ಕಾರಿ ಪದವಿ ಕಾಲೇಜು ತೃತೀಯ ಸ್ಥಾನ ಗಳಿಸಿವೆ.

ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಕಾಲೇಜುಗಳ 260 ಕ್ರೀಡಾಪಟುಗಳು ಈ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದರು. ಎನ್‌ಎಂಸಿ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ವಿದ್ಯಾರ್ಥಿಗಳ ಸಹಕಾರದಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.

Leave a Reply

Your email address will not be published. Required fields are marked *