ಮಂಗಳೂರು: ಪೌರಕಾರ್ಮಿಕರ ದಿನಾಚರಣೆಯ ಸಂದರ್ಭದಲ್ಲಿ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್, ಅಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರನ್ನು ಭೇಟಿಯಾಗಿ ಅವರ ಕಷ್ಟ-ಸುಖಗಳನ್ನು ವಿಚಾರಿಸಿದರು. ದಿನನಿತ್ಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಳ್ಳುವ ಪೌರಕಾರ್ಮಿಕರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳು, ಕೆಲಸದ ಒತ್ತಡ ಮತ್ತು ದಿನನಿತ್ಯದ ಬದುಕಿನ ಹೋರಾಟದ ಬಗ್ಗೆ ಕಾರ್ಮಿಕರಿಂದ ನೇರವಾಗಿ ಮಾಹಿತಿ ಪಡೆದುಕೊಂಡರು. ಕಾರ್ಮಿಕರಿಗೆ ಕಾನೂನುಬದ್ಧವಾಗಿ ಸಿಗಬೇಕಾದ ಕನಿಷ್ಠ ವೇತನ, ಸಕಾಲಕ್ಕೆ ವೇತನ ಪಾವತಿ ಹಾಗೂ ಇಲಾಖೆಯಿಂದ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಪೌರಕಾರ್ಮಿಕರ ಶ್ರಮದ ಬೆಲೆ ಹಿರಿದಾಗಿದ್ದು, ಅವರ ಹಕ್ಕುಗಳ ರಕ್ಷಣೆಗೆ ಮತ್ತು ಕನಿಷ್ಠ ವೇತನ ಖಾತರಿಗೆ ಬದ್ಧವಾಗಿರುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದರು. ಸಮಾಜದ ನೈರ್ಮಲ್ಯಕ್ಕಾಗಿ ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಶ್ರಮಿಸುವ ಪೌರಕಾರ್ಮಿಕರ ಬದುಕು ಹಸನಾಗಲು ಮತ್ತು ಅವರಿಗೆ ನ್ಯಾಯಯುತ ಕೂಲಿ ಸಿಗಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. “
