ಮಂಗಳೂರು: ಬಾಲ್ಕನಿ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವು – ಆಯೋಜಕರು ಹಾಗೂ ಕಟ್ಟಡ ಮಾಲೀಕರ ವಿರುದ್ಧ ಪ್ರಕರಣ ದಾಖಲು

News

ಮಂಗಳೂರಿನ ಎಮ್ಮೆಕೇರಿಯಲ್ಲಿರುವ ರಾಮು ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನಲ್ಲಿ ಬಾಲ್ಕನಿ ತಡೆಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸೇಂಟ್ ಅಲೋಶಿಯಸ್ ಕಾಲೇಜಿನ 16 ವರ್ಷದ ವಿದ್ಯಾರ್ಥಿ ಮಹಮ್ಮದ್ ಶಮ್ಮಾರ್ೂಬ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಳೆಯಂಗಡಿ ನಿವಾಸಿ ಮಹಮ್ಮದ್ ಇಲಿಯಾಸ್ ಮೊಯಿದಿನಬ್ಬ ಅವರ ಪುತ್ರರಾದ ಶಮ್ಮಾಝ್ ಅವರು ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ ತಂದೆಯ ದೂರಿನ ಆಧಾರದ ಮೇರೆಗೆ ಕಾರ್ಯಕ್ರಮದ ಆಯೋಜಕರು ಹಾಗೂ ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಆರೋಪದಡಿ ಭಾರತೀಯ ನ್ಯಾಯ ಸಂಹಿತೆ (BNS) ಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *