ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಡಾ. ಕೆ ಸುಧಾಕರನ್ ಜನವರಿ 31 ರಂದು ಸೇವಾ ನಿವೃತ್ತರಾದರು.
1988ರಲ್ಲಿ ನೆಹರು ಮಮೋರಿಯಲ್ ಕಾಲೇಜಿಗೆ ರಸಾಯನ ಶಾಸ್ತ್ರ ಉಪನ್ಯಾಸಕರಾಗಿ ಸೇವೆಗೆ ಸೇರಿದ್ದ ಇವರು 2009ರಲ್ಲಿ ನಿಯೋಜನೆ ಮೇರೆಗೆ ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಮತ್ತು 2014ರಿಂದ ಡಾ. ದಯಾನಂದ ಪೈ – ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದರು. ಹೀಗೆ ಪದವಿಪೂರ್ವ ಮತ್ತು ಪದವಿ ಕಾಲೇಜು ಶಿಕ್ಷಣ ಸಂಸ್ಥೆಗಳಲ್ಲಿ ಸುದೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ದಿನಾಂಕ 31.01.2025 ರಂದು ನೆಹರು ಮೆಮೋರಿಯಲ್ ಕಾಲೇಜಿನಿಂದ ತಮ್ಮ ಕರ್ತವ್ಯಕ್ಕೆ ನಿವೃತ್ತಿಯನ್ನು ಪಡೆದುಕೊಂಡಿರುತ್ತಾರೆ.
ಈ ಹಿನ್ನೆಲೆಯಲ್ಲಿ ಜನವರಿ 31 ಶುಕ್ರವಾರದಂದು ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ವಿದಾಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ ಶ್ರೀಯುತರಿಗೆ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು. ನಿವೃತ್ತರಾದ ಡಾ. ಟಿ ಸುಧಾಕರನ್ ಅವರು ಮಾತನಾಡಿ ಸ್ಥಾಪಕಾಧ್ಯಕ್ಷರನ್ನು ಸ್ಮರಿಸಿಕೊಂಡು ಕಾಲೇಜಿನ ಆಡಳಿತ ಮಂಡಳಿಗೆ, ಪ್ರಾಂಶುಪಾಲರಿಗೆ, ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ವೃಂದದವರಿಗೆ, ಧನ್ಯವಾದವನ್ನು ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಗ್ರಂಥಪಾಲಕರಾದ ಉಮೇಶ್, ಕಛೇರಿ ಅಧೀಕ್ಷಕಿ ನಿವೇದಿತಾ ಎಂ, ಕಛೇರಿ ಸಿಬ್ಬಂದಿ ಗಣೇಶ್.ಡಿ ಮತ್ತು ಎಲ್ಲಾ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.