ಕೆಪಿಸಿಸಿ ಸಂಯೋಜಕ ಹುದ್ದೆಗೆ ಅರ್ಜಿ ಸಲ್ಲಿಸಿದ ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ

News

ಬೆಂಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ (AICC) ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ಸಂಘಟನ್ – ಸೃಜನ್ ಅಭಿಯಾನ್’ ಕಾರ್ಯಕ್ರಮದಡಿಯಲ್ಲಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಕೆಪಿಸಿಸಿ ಕಾರ್ಯದರ್ಶಿ ಮತ್ತು ಸಂಯೋಜಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ನಿಕಟಪೂರ್ವ ಕಾರ್ಯದರ್ಶಿ ಕೆ.ಎಂ. ಮುಸ್ತಫ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಂಯೋಜಕರ ಹುದ್ದೆಗಾಗಿ ಅಧಿಕೃತವಾಗಿ ಅರ್ಜಿ ಸಲ್ಲಿಸಿದರು.

ನೇಮಕಾತಿ ಪ್ರಕ್ರಿಯೆ ಮತ್ತು ಸಮಿತಿ ವಿವರ

ಪಕ್ಷದ ಈ ನೂತನ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ವ್ಯವಸ್ಥಿತವಾಗಿ ಕೈಗೊಳ್ಳಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಾಜಿ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ 7 ಪ್ರಮುಖ ಸದಸ್ಯರನ್ನು ಒಳಗೊಂಡ ಈ ಸಮಿತಿಯು ಅಭ್ಯರ್ಥಿಗಳ ಸಂದರ್ಶನ ನಡೆಸಿ ಅಂತಿಮ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದ್ದು, ಆಸಕ್ತ ಹಾಗೂ ಅರ್ಹ ಕಾಂಗ್ರೆಸ್ ಮುಖಂಡರು ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *