ಸುಳ್ಯ ,ಫೆ 14: ವಕ್ಫ್ ಮಸೂದೆ 2024 ರಾಜ್ಯ ಸಭೆಯಲ್ಲಿ ಮಂಡಿಸಿದ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರವ್ಯಾಪಿ ಹಮ್ಮಿಕೊಂಡಿರುವ ಪ್ರತಿಭಟನೆಯ ಭಾಗವಾಗಿ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ವತಿಯಿಂದ ಪ್ರತಿಭಟನೆಯನ್ನು
ಸುಳ್ಯದ ಗಾಂಧಿನಗರ, ಸವಣೂರು, ಕಳಾರ ಕಡಬ, ಕಡಬ ಟೌನ್, ಅಂಕತಡ್ಕ, ನೆಲ್ಯಾಡಿ, ಮುಂತಾದ ಕಡೆಗಳಲ್ಲಿ ಏಕಕಾಲಕ್ಕೆ ಹಮ್ಮಿಕೊಳ್ಳಲಾಯಿತು.
ಇದೇ ಸಮಯದಲ್ಲಿ ಪ್ರತಿಭಟನಾಕಾರರು ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಭಿತ್ತಿಪತ್ರವನ್ನು ಪ್ರದರ್ಶಿಸಿ ಪ್ರತಿಭಟಿಸಲಾಯಿತಲ್ಲದೇ, ಮಸೂದೆಯ ಪ್ರತಿಯನ್ನು ಹರಿದು ಹಾಕಿ ಬೆಂಕಿ ಹಚ್ಚಿ ವಿರೋಧವನ್ನು ವ್ಯಕ್ತಪಡಿಸಲಾಯಿತು.


