ರಾಷ್ಟ್ರೀಯ EBSB ಶಿಬಿರಕ್ಕೆ ಎನ್.ಎಂ.ಸಿಯ ಇಬ್ಬರು ಎನ್‌ಸಿಸಿ ಕೆಡೆಟ್‌ಗಳ ಆಯ್ಕೆ

News

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿ CPL ಗೌರವ್ ಮತ್ತು ತೃತೀಯ ಬಿಕಾಂ ವಿದ್ಯಾರ್ಥಿ CPL ವಿಕಾಸ್ ಎನ್. ಅವರು ಒಡಿಶಾ ರಾಜ್ಯದ ರೂರ್ಕೆಲಾದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಏಕ ಭಾರತ ಶ್ರೇಷ್ಠ ಭಾರತ (EBSB) ಶಿಬಿರದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

ದೇಶದ ವಿವಿಧ ರಾಜ್ಯಗಳ ಎನ್‌ಸಿಸಿ ಕೆಡೆಟ್‌ಗಳು ಭಾಗವಹಿಸುತ್ತಿರುವ ಈ ಶಿಬಿರವು ರಾಷ್ಟ್ರೀಯ ಏಕತೆ, ಸಾಂಸ್ಕೃತಿಕ ವಿನಿಮಯ ಹಾಗೂ ಪರಸ್ಪರ ಸಹಕಾರದ ಮನೋಭಾವವನ್ನು ಬೆಳೆಸುವ ಉದ್ದೇಶವನ್ನು ಹೊಂದಿದೆ.

ಕಾಲೇಜಿನ ಎನ್‌ಸಿಸಿ ಘಟಕದ ಮುಖ್ಯಸ್ಥರಾದ ಕ್ಯಾಪ್ಟನ್ ಸೀತಾರಾಮ ಎಂ.ಡಿ. ಅವರ ಮಾರ್ಗದರ್ಶನದಲ್ಲಿ ಕೆಡೆಟ್‌ಗಳು ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ. ರಾಷ್ಟ್ರೀಯ ಮಟ್ಟದ ಶಿಬಿರದಲ್ಲಿ ಕಾಲೇಜನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಇವರ ಭಾಗವಹಿಸುವಿಕೆ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದು ಕಾಲೇಜು ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.
ಕೆಡೆಟ್‌ಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್‌ಸಿಸಿ ಅಧಿಕಾರಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *