ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸಂಪ್ಯ ಅವರಿಗೆ ಟಿ.ಎಂ. ಶಹೀದ್ ತೆಕ್ಕಿಲ್ ಸನ್ಮಾನ

News

ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಇಬ್ರಾಹಿಂ ಅವರಂತಹ ಶಿಕ್ಷಕರು ಇಂದಿನ ಸಮಾಜಕ್ಕೆ ಅವಶ್ಯಕ: ಟಿ.ಎಂ. ಶಹೀದ್ ತೆಕ್ಕಿಲ್

ಉಪ್ಪಿನಂಗಡಿ/ಸುಳ್ಯ: ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಶ್ರಮಿಸುತ್ತಿರುವ ಇಬ್ರಾಹಿಂ ಅವರಂತಹ ಸಮರ್ಪಣಾಭಾವದ ಶಿಕ್ಷಕರು ಇಂದಿನ ಸಮಾಜಕ್ಕೆ ಅತ್ಯಂತ ಅವಶ್ಯಕವಾಗಿದ್ದಾರೆ ಎಂದು ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅಭಿಪ್ರಾಯಪಟ್ಟಿದ್ದಾರೆ.

ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಜಿಲ್ಲಾ ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸಂಪ್ಯ ನಿವಾಸಿ ಇಬ್ರಾಹಿಂ ಬಿ. ರವರಿಗೆ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 2026ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಅವರನ್ನು ಗೌರವಿಸಿ ಅವರು ಮಾತನಾಡಿದರು.

ಶಿಸ್ತಿನ ಸಿಪಾಯಿಯಾಗಿ, ಸಂಘಟನೆ, ಸೌಹಾರ್ದತೆ ಮತ್ತು ಸಮನ್ವಯತೆಗೆ ಹೆಚ್ಚು ಒತ್ತು ನೀಡಿರುವ ಇಬ್ರಾಹಿಂ ಅವರ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕಾರ್ಯಶೈಲಿ ಅತ್ಯಂತ ಅಭಿನಂದನೀಯ ಎಂದು ಅವರು ಬಣ್ಣಿಸಿದರು.

ಈ ಸನ್ಮಾನ ಸಮಾರಂಭದಲ್ಲಿ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಅಧ್ಯಕ್ಷ ಕೆ.ಬಿ. ಇಬ್ರಾಹಿಂ, ಜಮ್ಮಿಯ್ಯತುಲ್ ಫಲಾಹ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಅಡ್ವೋಕೇಟ್ ಮೂಸ ಪೈಂಬಚ್ಚಾಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಸನ್ಮಾನಿತರಾದ ಉಪನ್ಯಾಸಕ ಇಬ್ರಾಹಿಂ ಅವರು ಸುಳ್ಯ ಗಾಂಧಿನಗರದ ನಿವಾಸಿ, ಡಿ.ಸಿ.ಸಿ. ಬ್ಯಾಂಕ್‌ನ ನಿವೃತ್ತ ಡಿಜಿಎಂ ಇಸ್ಮಾಯಿಲ್ ಅವರ ಅಳಿಯರಾಗಿದ್ದಾರೆ.

Leave a Reply

Your email address will not be published. Required fields are marked *