ಮಂಗಳೂರು: ಮುಂಬರುವ ಡಿಸೆಂಬರ್ನಲ್ಲಿ ಅತ್ಯಂತ ಅದ್ದೂರಿಯಾಗಿ ಆಯೋಜಿಸಲು ಉದ್ದೇಶಿಸಿರುವ ‘ಕರಾವಳಿ ಉತ್ಸವ’ ಹಾಗೂ ಸರ್ಕಾರದ ಪ್ರಗತಿ ಪರಿಶೀಲನಾ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.
ಸಭೆಯಲ್ಲಿ ಕರಾವಳಿ ಉತ್ಸವವನ್ನು ಅತ್ಯಂತ ವೈವಿಧ್ಯಮಯ ಹಾಗೂ ಜನಮೆಚ್ಚುಗೆ ಗಳಿಸುವ ರೀತಿಯಲ್ಲಿ ಆಚರಿಸಲು ಸಚಿವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಕರಾವಳಿಯ ವಿಶಿಷ್ಟ ಜಾನಪದ ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ಕಾರ್ಯಕ್ರಮಗಳೊಂದಿಗೆ ಸ್ಥಳೀಯ ಪ್ರತಿಭೆಗಳಿಗೆ ಹಾಗೂ ಕಲಾವಿದರಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಯಿತು.
ಪ್ರಮುಖರ ಉಪಸ್ಥಿತಿ: ಈ ಮಹತ್ವದ ಸಭೆಯಲ್ಲಿ ಕರ್ನಾಟ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಇದರ ಅಧ್ಯಕ್ಷ (ಸಚಿವ ದರ್ಜೆ)ಟಿ.ಎಂ. ಶಾಹೀದ್ ತೆಕ್ಕಿಲ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ., ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಐ.ಪಿ.ಎಸ್., ಮಂಗಳೂರು ಎಸ್ಪಿ ಡಿ. ಅರುಣ್ ಕೆ. ಐ.ಪಿ.ಎಸ್., ಜಿಲ್ಲಾ ಪಂಚಾಯತ್ ಸಿಇಒ ನರ್ವಾಡೆ ವಿನಾಯಕ ಕರ್ಬಾರಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
