ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಫೆಬ್ರವರಿ ತಿಂಗಳಲ್ಲಿ ವಯೋ ನಿವೃತ್ತಿ ಹೊಂದಿದ ಮೆಕ್ಯಾನಿಕಲ್ ವಿಭಾಗದ ಆಯ್ಕೆ ಶ್ರೇಣಿ ಉಪನ್ಯಾಸಕ ಮೇಘರಾಜ ಹಾಗೂ ಸಿವಿಲ್ ವಿಭಾಗದ ಮೆಕ್ಯಾನಿಕ್ ಪರಮೇಶ್ವರ ಕೇರ್ಪಳ ಇವರ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ ನಿವೃತ್ತರನ್ನು ಸನ್ಮಾನಿಸಿ ಮಾತನಾಡುತ್ತಾ ಇಂದು ನಿವ್ರತ್ತಿಗೊಂಡ ಇಬ್ಬರೂ ಸಿಬ್ಬಂದಿಗಳು ತಮ್ಮ ವೃತ್ತಿಗೆ ನ್ಯಾಯ ಒದಗಿಸಿರುವುದಲ್ಲದೆ ಕೌಟುಂಬಿಕವಾಗಿಯೂ ತಮ್ಮ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ನೀಡಿ ಉತ್ತಮ ಪೋಷಕರಾಗಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಯತೀಶ್ ಕೆ.ಎನ್, ಅಧೀಕ್ಷಕ ಧನಂಜಯ ಕಲ್ಲುಗದ್ದೆ ಸನ್ಮಾನಿತರನ್ನು ಅಭಿನಂದಿಸಿ ಮಾತನಾಡಿದರು. ನಿವೃತ್ತರಿಗೆ ಆಡಳಿತ ಮಂಡಳಿ, ಕೆ. ವಿ. ಜಿ. ಪಾಲಿಟೆಕ್ನಿಕ್ ಮತ್ತು ವಿವಿಧ ವಿಭಾಗಗಳ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲ ಡಾ. ಸುರೇಶ್ ವಿ, ಕೆ.ವಿ.ಜಿ. ಐಟಿಐ ಪ್ರಾಂಶುಪಾಲ ಚಿದಾನಂದ ಕೆ, ಕೆವಿಜಿ ಅಮರ ಜ್ಯೋತಿ ಪಿ.ಯು ಕಾಲೇಜಿನ ಪ್ರಾಂಶುಪಾಲೆ ಡಾ.ಯಶೋದಾ ರಾಮಚಂದ್ರ, ಡೆಂಟಲ್ ಕಾಲೇಜಿನ ಆಡಳಿತಾಧಿಕಾರಿ ಮಾಧವ ಬಿ.ಟಿ, ಟೀಚರ್ಸ್ ಕೋ ಆಪರೇಟಿವ್ ಭ್ಯಾಂಕ್ ನ ಮ್ಯಾನೇಜರ್ ಹೇಮಲತಾ ಹಾಗೂ ಸಿಬ್ಬಂದಿಗಳು ಮೊದಲಾದವರು ಭಾಗವಹಿಸಿದ್ದರು. ಉಪ ಪ್ರಾಂಶುಪಾಲ ಹರೀಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಇಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥ ವಿವೇಕ್ ಪಿ ವಂದಿಸಿದರು.
ಸಿವಿಲ್ ವಿಭಾಗದ ಉಪನ್ಯಾಸಕ ಸುನಿಲ್ ಕುಮಾರ್ ಎನ್.ಪಿ ಮತ್ತು ಮೆಕ್ಯಾನಿಕಲ್ ವಿಭಾಗದ ಉಪನ್ಯಾಸಕ ದೀಕ್ಷಿತ್ ಯು.ಅರ್ ಸನ್ಮಾನ ಪತ್ರ ವಾಚಿಸಿದರು. ಜಯಲಕ್ಷ್ಮಿ ಕೆ. ಹಾಗೂ ಪದ್ಮಾವತಿ ಜೆ ಪ್ರಾರ್ಥಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಕಾರ್ಯಕ್ರಮ ನಿರೂಪಿಸಿದರು.
