ಉಜಿರೆ: ಶಾಲಾ ಶಿಕ್ಷಣ ಇಲಾಖೆ (ಪಪೂ) ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿಯು ಕಾಲೇಜು, ಉಜಿರೆ ಇದರ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಕ್ರೀಡಾಳುಗಳಿಗೆ ನಾಗರಾಜ್ ನಾಯ್ಕ್ ಭಟ್ಕಳ ಅವರು ತರಬೇತಿ ನೀಡಿದ್ದರು, ಪ್ರಕಾಶ್ ಯಾದವ್ ಅವರು ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ್ದರು.
ವೈಯಕ್ತಿಕ ಸಾಧನೆಗಳು
ದ್ವಿತೀಯ ಕಲಾ ವಿಭಾಗದ ಪ್ರಮೋದ್ ಎಂ.ಯು. ಅವರು ಸರ್ವಾಂಗೀಣ ಆಟಗಾರ ಪ್ರಶಸ್ತಿಯನ್ನು ಗಳಿಸಿದ್ದಾರೆ. ದ್ವಿತೀಯ ವಾಣಿಜ್ಯ ವಿಭಾಗದ ಪ್ರೀತಮ್ ಮುಗ್ದೂರ್ ಅವರು ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಅಮೊಘ ಸಾಧನೆಗೈದ ಕಬಡ್ಡಿ ತಂಡದ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು, ಆಡಳಿತಾಧಿಕಾರಿ, ಹಾಗು ಬೋಧಕ ಮತ್ತು ಬೋಧಕೇತರ ವೃಂದದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
